ಎಂ.ಎ ವಿದ್ಯಾರ್ಥಿನಿಗೆ ಚಿನ್ನದ ಪದಕ

(ಸಂಜೆವಾಣಿ ವಾರ್ತೆ)
ಸುರಪುರ: ನ.11:ಇಲ್ಲಿನ ಮೈಲಾರಲಿಂಗೇಶ್ವರ ಸ್ನಾತಕೋತ್ತರ ಮಹಾವಿದ್ಯಾಲಯದ ಎಂ.ಎ ವಿದ್ಯಾರ್ಥಿನಿಗೆ ಚಿನ್ನದ ಪದಕ ದೊರೆತಿದೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿದ್ಯಾವರ್ಧಕ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ರಂಗಂಪೇಟೆಯ ಮೈಲಾರಲಿಂಗೇಶ್ವರ ಸ್ನಾತಕೋತ್ತರ ಮಹಾವಿದ್ಯಾಲಯದ ಎಂ.ಎ ಇತಿಹಾಸ ವಿಭಾಗದಲ್ಲಿ ಮಾಧುರಿ ಲಕ್ಷ್ಮಣ್ ಮ್ಯಾಕಲೆ ಎನ್ನುವ ವಿದ್ಯಾರ್ಥಿನಿಗೆ 19-20ನೇ ಸಾಲಿನ ಚಿನ್ನದ ಪದಕ ದೊರೆತಿದೆ.
ಡಿ.2021 ರಂದು ನಡೆಯಲಿರುವ ಗುಲ್ಬರ್ಗ ವಿಶ್ವವಿದ್ಯಾಲಯದ 39ನೇ ಘಟಿಕೋತ್ಸವ ಸಮಾರಂಭದಲ್ಲಿ ಚಿನ್ನದ ಪದಕ ಪ್ರಧಾನ ಮಾಡಲಾಗುತ್ತಿದ್ದು. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಭೀಮಣ್ಣ ಬಿಲ್ಲವ್, ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಕುಲಕರ್ಣಿ ಗೌಡಗೇರಾ ಹಾಗು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.