ಎಂ.ಪಿ. ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ದಾವಣಗೆರೆ, ಮೇ.4; ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಅವರು ಮೇ 05 ರಿಂದ 09 ರವರೆಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಎಂ.ಪಿ. ರೇಣುಕಾಚಾರ್ಯ ಅವರು ಮೇ 05 ರಿಂದ ಮೇ 09 ರ ವರೆಗೆ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯಿಂದ ಹೊರಟು, ಸಂಜೆ 06 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವೀಕ್ಷಣೆ ನಡೆಸುವರು. ಅಲ್ಲದೆ ಆಗಿಂದಾಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್-19 ಸೋಂಕನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಹಾಗೂ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಿಸುವರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ತಿಳಿಸಿದ್ದಾರೆ.