ಎಎಸ್‌ಐ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ, ಮೇ ೩೧- ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಐರೊರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನು ಮಂಚಿ ನಿವಾಸಿ ಬಂಟ್ವಾಳ ನಗರ ಠಾಣಾ ಎಎಸ್ಐ ಜಯರಾಮ ರೈ (58) ಎಂದು ಗುರುತಿಸಲಾಗಿದೆ. ಜಯರಾಮ ರೈ ಅವರು ಕೆಲ ದಿನಗಳಿಂದ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದು ಒಂದು ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದ.ಕ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಕ್ಲಿಷ್ಟಕರವಾದ ಪರಿಸ್ಥಿತಿಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದು, ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ಮಾಡುತ್ತಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.