ಎಐಡಿಎಸ್ಓ ಕಛೇರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಭೆ


ಸಂಜೆವಾಣಿ ವಾರ್ತೆ
ಬಳ್ಳಾರಿ, ಜೂ.06: ‌ನಗರದ ಎಐಡಿಎಸ್ಓ ಜಿಲ್ಲಾ ಕಛೇರಿಯಲ್ಲಿ ಇಂದು ಜಿಲ್ಲೆಯ ವಿವಿಧ ಶಾಲಾ -ಕಾಲೇಜಿನ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ದೆಹಲಿಯಲ್ಲಿ ರೈತರ ಹೋರಾಟದಿಂದ ಸ್ಪೂರ್ತಿ ಪಡೆದು ನಮ್ಮ ರಾಜ್ಯದಲ್ಲಿ ಎನ್.ಇ.ಪಿ ವಿರುದ್ಧ ಬಲಿಷ್ಠ ಹೋರಾಟಕ್ಕೆ ಬಂದಾಗ ಸಾಕಷ್ಟು ಅಡೆತಡೆ ಬಂದರು ಕೂಡ ವಿದ್ಯಾರ್ಥಿಗಳು ಒಂದೇ ಗುರಿ! ಅದು ಸರ್ಕಾರಿ ಶಾಲೆ-ಕಾಲೇಜುಗಳು ಉಳಿಯಬೇಕು ಎಂದು ಒಗ್ಗಟ್ಟು ಮೂಡಿಸಿ ಭಗತ್ ಸಿಂಗ್, ನೇತಾಜಿ ಅವರು ವಿಚಾರಗಳನ್ನು ಮೈಗೂಡಿಸಿಕೊಂಡು ಹೋರಾಟ ಕಟ್ಟಿ ಕರ್ನಾಟಕದಲ್ಲಿ ಎನ್.ಇ.ಪಿ ಹಿಂತೆಗೆದುಕೊಳ್ಳವಂತೆಯಾಯಿತು ಎಂದು ಹೇಳಿದರು.
ವಿದ್ಯಾರ್ಥಿಗಳು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು.
ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಅವರು ಮಾತನಾಡಿ ಈಗ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ, ಶುಲ್ಕ ಹೆಚ್ಚಳ, ವಿದ್ಯಾರ್ಥಿ ವೇತನ, ಬಸ್ ಸಮಸ್ಯೆಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದರು. ಅನ್ಯಾಯದ ವಿರುದ್ದ ಹೋರಾಟ ಮಾಡುವ, ದ್ವನಿ ಎತ್ತುವ ವ್ಯಕ್ತಿತ್ವ ರೂಪಿಸಿ ಕೊಳ್ಳಿ ಎಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಎಐಡಿಎಸ್ಓ ರಾಜ್ಯ ಸೆಕ್ರೆಟರಿಯೇಟ್ ಸದಸ್ಯರು ರವಿಕಿರಣ್.ಜೆ.ಪಿ, ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ, ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಜಿಲ್ಲಾ ಉಪಾಧ್ಯಕ್ಷರು ಎಂ.ಶಾಂತಿ, ಉಮಾ, ಪ್ರಮೋದ್ ಮತ್ತು ಜಿಲ್ಲಾ ಖಜಾಂಚಿ ಅನುಪಮಾ, ಜಿಲ್ಲಾ ಕಛೇರಿ ಕಾರ್ಯದರ್ಶಿ ನಿಹಾರಿಕ ಹಾಗೂ ಹೊನ್ನೂರು ಸ್ವಾಮಿ, ರೂಪ, ಗಣೇಶ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.