ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ ಎನ್.ಎಸ್ ಬೋಸರಾಜು

ರಾಯಚೂರು.ನ.೨೪- ಚುನಾವಣೆ: ರಾಜಕೀಯ ವಿದ್ಯಮಾನಗಳ ಕುರಿತು ಸುಧೀರ್ಘ ಚರ್ಚೆ
ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆ ಪೂರ್ವ ಸಿದ್ಧತೆ ಕುರಿತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜಕೀಯ ಉದ್ಯಮಾನಗಳ ಕುರಿತು ಎಐಸಿಸಿ ಪ್ರದಾನ ಕಾರ್ಯದರ್ಶಿ ಮಾಣಿಕ್ಯ ಟ್ಯಾಗೋರ್ ಕಾರ್ಯದರ್ಶಿ ಎನ್.ಎಸ್ ಬೋಸರಾಜು ಅವರು ಸುಧೀರ್ಗವಾಗಿ ಚರ್ಚಿಸಿದರು.
ದೆಹಲಿಯಲ್ಲಿ ಎಐಸಿಸಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನೂತನ ಅದ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ, ಕರ್ನಾಟಕ ಹಾಗೂ ತೆಲಂಗಾಣದ ಮುಂಬರುವ ಚುನಾವಣೆಯ ಪೂರ್ವ ತಯ್ಯಾರಿ ಕುರಿತು ಹಾಗೂ ತಳಮಟ್ಟದಿಂದ ಪಕ್ಷ ಸಂಘಟಿಸಿ ಜನವಿರೋದಿ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಎಲ್ಲ ಸಿದ್ಧತೆಗಳ ಕುರಿತು ಸುಧೀರ್ಗವಾಗು ಚೆರ್ಚಿಸಿದರು.