ಎಕ್ಸ್‌ಪ್ರೆಸ್‌ ವೇಯಲ್ಲಿ ಮತ್ತೊಂದು ಅಪಘಾತ ಮೂವರು ಸಾವು

ಬೆಂಗಳೂರು,ಮೇ.1-ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ ಘಟನೆ ನಡೆದಿದೆ.
ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇನ
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓಕಳೀಪುರಂನ ಯಾಸೀನ್ (22),ಮಾಗಡಿ ರಸ್ತೆಯ ರಹಮಾನ್‌(23) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ಮೂವರು ಯುವಕರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದು ಕೆಳಗೆ ಬಿದ್ದ ಯುವಕರ ಮೇಲೆ ವೇಗವಾಗಿ ಬಂದ ಮತ್ತೊಂದು ಕಾರು ಕೂಡಾ ಡಿಕ್ಕಿ ಹೊಡೆದಿದೆ.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ರಾಮನಗರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.