ಎಕ್ಸ್‌ಲೆಂಟ್ ಕೋಚಿಂಗ್ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ

ಕೋಲಾರ,ನ.೨: ನಗರದ ಎಕ್ಸ್‌ಲೆಂಟ್ ಐ.ಎ.ಎಸ್. ಕೆ.ಎ.ಎಸ್ ಕೋಚಿಂಗ್ ಸೆಂಟರ್‍ನಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ, ಸ್ಪರ್ಧಾತ್ಮಕ ಪರೀಕ್ಷೆಗಳಾದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಪಿ.ಡಿ.ಒ., ಶಿಕ್ಷಕರ ಪರೀಕ್ಷೆಗಳಿಗೆ ಉಚಿತ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ನರಸಿಂಹಯ್ಯನವರನ್ನು ಸನ್ಮಾನಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರುಗಳು ಮತ್ತು ಉಪ ಪ್ರಾಂಚಾರ್ಯ ವಿ.ರುದ್ರಪ್ಪ ಅವರು ವಿದ್ಯಾರ್ಥಿಳು ಕನ್ನಡದಲ್ಲಿ ಸ್ಪಧಾತ್ಮಕ ಪರೀಕ್ಷೆಗಳನ್ನು ಬರೆದು ಕನ್ನಡ ಭಾಷೆಗೆಯನ್ನು ಉಳಿಸಿ ಬೆಳೆಸಬೇಕೆಂದರು. ನರಸಿಂಹಯ್ಯನವರನ್ನು ಸನ್ಮಾನಿಸಿ ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಅವರಿಗೆ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಲಭಿಸಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆರ್. ಲಕ್ಷ್ಮೀನಾರಾಯಣ ಮಾತನಾಡಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಕನ್ನಡದಲ್ಲಿ ಅಧ್ಯಯನ ಮಾಡಿ ಹೆಚ್ಚಿನ ಜ್ಞಾನ ಪಡೆದು ಕನ್ನಡ ಉಳಿಸುವ ಕೆಲಸ ಮಡಬೇಕೆಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ಅರಣ್ಯಾಧಿಕಾರಿಗಳಾದ ಆಂಜಿನಪ್ಪ ಕೆಎಸ್‌ಆರ್‍ಟಿಸಿ ಮುನಿಯಪ್ಪ, ಪೋಸ್ಟ್ ವೆಂಕಟರವಣಪ್ಪ ಉಪಸ್ಥಿತರಿದ್ದರು. ನವೀನ್ ನಿರೂಪಿಸಿ, ಮಂಜುನಾಥ್ ವಂದಿಸಿದರು.