`ಎಕ್ಸ್ ಅಂಡ್ ವೈ; ಹಿಂದೆ ಸತ್ಯ ಪ್ರಕಾಶ್

ನಿರ್ದೇಶಕ ಡಿ.ಸತ್ಯ ಪ್ರಕಾಶ್ ಇದೀಗ  “ಎಕ್ಸ್ ಅಂಡ್ ವೈ”  ಹಿಂದೆ ಬಿದ್ದಿದ್ದಾರೆ.  ಸ್ನೇಹಿತರು, ಕಲಾವಿದರು, ಹಾಗೂ ತಮ್ಮ ತಂಡದ ತಂತ್ರಜ್ಞರ ಸಮ್ಮುಖದಲ್ಲಿ ಚಿತ್ರದ ಮುಹೂರ್ತ ನಡೆದಿದೆ. ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನದ ಜೊತೆಗೆ ಸತ್ಯಪ್ರಕಾಶ್ ಹಾಗೂ ಅಥರ್ವ ಪ್ರಕಾಶ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ಲವಿತ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ ನರ್ದೇಶನ, ಬಿ.ಎಸ್ ಕೆಂಪರಾಜು ಅವರ ಸಂಕಲನ ಇದೆ. ವರದರಾಜ್ ಕಾಮತ್ ಕಲಾನಿರ್ದೇಶನ ಮಾಡುತ್ತಿದ್ದಾರೆ. ಇಡೀ ಚಿತ್ರ ಬೆಂಗಳೂರು ಮತ್ತು ಮಂಗಳೂರು ಸುತ್ತ ಮುತ್ತಣ ಪರಿಸರದಲ್ಲಿ ಚಿತ್ರೀಕರಿಸಲು ಯೋಜಿಸಲಾಗಿದೆ ಎಂದು ಸತ್ಯಪ್ರಕಾಶ್ ತಿಳಿಸಿದ್ದಾರೆ.