ಎಚ್‍ಡಿಕೆ ಬಿಜೆಪಿಗೆ ಸೇರ್ಪಡೆ ವಿಚಾರ ಗೊತ್ತಿಲ್ಲ: ಲಾಡ್

ಹುಬ್ಬಳ್ಳಿ, ಜು 15: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿಗೆ ಸೇರ್ಪಡೆಯಾಗುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯದ ನಿಗಮ ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ಬಗ್ಗೆ ಅಧ್ಯಕ್ಷರು ಅರ್ಜಿಗಳನ್ನು ಸಲ್ಲಿಸಲು ಹೇಳಿದ್ದು, ಸಮಿತಿ ಮುಖಾಂತರ ಆಯ್ಕೆ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನು ತಡೆಯುವ ಕೆಲಸವನ್ನು ಸದ್ಯ ಇರುವಂತ ಕಮಿಷನರ್ ಅವರು ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಅಪರಾಧಗಳನ್ನು ನೋಡಿದರೆ ಇದು ಒಳ್ಳೆ ಬೆಳವಣಿಗೆ ಅಲ್ಲ. ಪೆÇಲೀಸರು ಅವರ ಕೆಲಸವನ್ನು ಮಾಡುತ್ತಾರೆ ಎಂದರು.
ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಬಿಜೆಪಿಯವರನ್ನೇ ಕೇಳಿ. ದೇಶದಲ್ಲಿನ ಎಲ್ಲದಕ್ಕೂ ಅವರೇ ಸಲಹೆ ಕೊಡುತ್ತಾರೆ. ಅವರಿಗೆ ಇಂತಹ ಪ್ರಶ್ನೆ ಕೇಳಿದರೆ ಅವರು ಉತ್ತರ ಕೊಡುವುದಿಲ್ಲ ಎಂದು ವ್ಯಂಗ್ಯವಾಡಿದರು.