ಎಚ್‌ಡಿಕೆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಏ. ೧೫- ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ೫ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯ ಬೇಜವಾಬ್ದಾರಿ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು..
ಕಾಂಗ್ರೆಸ್ ಭವನ ಗಾಂಧಿ ಪ್ರತಿಮೆ ರೇಸ್ ಕೋರ್ಸ್ ರಸ್ತೆ ಇಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂ.ಇ.ಐ.ನಿಗಮದ ಅಧ್ಯಕ್ಷರಾದ ಎಸ್.ಮನೋಹರ್, ಮಾಜಿ ಬಿಬಿಎಂಪಿ ಸದಸ್ಯ ಉದಯ್ ಶಂಕರ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಆನಂದ್, ಪ್ರಕಾಶ್, ಹೇಮರಾಜ್, ಚಿಕ್ಕಣ್ಣ, ನಂದಕುಮಾರ್ ಜಯಶ್ರೀ, ಪ್ರೇಮಲತಾ, ಪುಷ್ಪ, ಮಾಧವಿ, ಪುಟ್ಟರಾಜು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಎಸ್.ಮನೋಹರ್ ರವರು ಮಾತನಾಡಿ ಕಾಂಗ್ರೆಸ್ ಪಕ್ಷದ ಸರ್ಕಾರ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ೫ ಗ್ಯಾರಂಟಿ ಭರವಸೆಗಳನ್ನು ಪೂರೈಸಿದ್ದಾರೆ.
ರಾಜ್ಯದ ಪ್ರತಿ ಕುಟುಂಬ ಗ್ಯಾರಂಟಿ ಯೋಜನೆಯ ಅರ್ಹ ಫಲಾನುಭವಿಗಳು ಇದ್ದಾರೆ. ಗ್ಯಾರಂಟಿ ಯೋಜನೆಯಗಳು ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ . ಮಹಿಳೆಯ ಸ್ವಾಭಿಮಾನದ ಬದುಕು ಸಾಗಿಸಲು ಮನೆಯ ಯಾಜಮಾನಿ ೨೦೦೦ಸಾವಿರ, ಅನ್ನಭಾಗ್ಯ ಮತ್ತು ಮಹಿಳೆಯರಿಗೆ ಉಚಿತ ಬಸ್ , ೨೦೦ಯೂನಿಟ್ ವಿದ್ಯುತ್ ಉಚಿತ ಯೋಜನೆಗಳು ಮಹಿಳೆಯರ ಸ್ವಾವಂಲಭಿ ಜೀವನಕ್ಕೆ ಅನುಕೂಲವಾಗಿದೆ. ಆರ್ಥಿಕವಾಗಿ ದುರ್ಬಲರಾದ ಕುಟುಂಬಗಳು ಇಂದು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.