ಬೆಂಗಳೂರು,ಸೆ.೨೮-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ.
ಆಯ್ಕೆ ಸಮಿತಿ ಶಿಫಾರಸು ಮಾಡಿರುವ ಪಟ್ಟಿಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಈಗಾಗಲೇ ಅನುಮೋದನೆ ನೀಡಿದ್ದಾರೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರ ಅಸಾಧಾರಣ ಸಾಧನೆ ಮತ್ತು ರೈತನ ಮಗನಾಗಿ ಮಾಜಿ ಪ್ರಧಾನಿ ದೇವೇಗೌಡರು ಉನ್ನತ ಸ್ಥಾನಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯವು ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.
ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ.
ಈ ತಿಂಗಳ ೨೯ ರಂದು (ನಾಳೆ) ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಆದರೆ, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಂದ್‌ನಿಂದಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ.