ಎಚ್ ಡಿಕೆ ಗ್ರಾಮ ವಾಸ್ತವ್ಯ ಕಾಪಿ ಮಾಡಲ್ಲ:ಬಿಸಿಪಾ

ಮಂಡ್ಯ, ನ 14- ಕೃಷಿ ಬಿ.ಸಿ.ಪಾಟೀಲ್ ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ರೈತರೊಂದಿಗೆ ಕಬ್ಬು ಮತ್ತು ರಾಗಿ ಬಿತ್ತನೆ ಮಾಡಿ ಗಮನ ಸೆಳೆದರು.
ಜಿಲ್ಲೆಯ ಹೊಸಕೋಟೆಯಲ್ಲಿ ತಮ್ಮ ಹುಟ್ಟುಹಬ್ಬದ ದಿನದಂದೆ ಟ್ರ್ಯಾಕ್ಟರ್ ಚಲಾಯಿಸಿ ಈ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ಆದರೆ ತಾವು ಅದನ್ನು ಕಾಪಿ ಮಾಡುವುದಿಲ್ಲ. ರೈತರ ಜತೆಗಿದ್ದು ಸಮಸ್ಯೆ ಅರಿತು ರೈತರ ಸಮಸ್ಯೆ ಆಲಿಸುತ್ತೇನೆ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ಅವರು ಗ್ರಾಮದಲ್ಲಿದ್ದು
ಮಲಗಿ ಹೋಗುತ್ತಿದ್ದರು.ಆದರೆ ನಾನು ವಾಸ್ತವತೆಯನ್ನು ಅರಿಯುತ್ತಿದ್ದೇನೆ. ನಾನು ಅವರನ್ನು ಕಾಪಿ ಮಾಡುತ್ತಿಲ್ಲ. ನಾನು ಬೆಳಗ್ಗಿಯಿಂದ ರಾತ್ರಿವರೆಗೂ ಇದ್ದು ವಾಸ್ತವತೆ ಅರಿಯುತ್ತಿದ್ದೇನೆ. ಪ್ರತಿ ಜಿಲ್ಲೆಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸುತ್ತೇವೆ ಎಂದು ತಿಳಿಸಿದರು.
ತಾವು ಮಾಡುವ ಈ ಕಾರ್ಯಕ್ರಮದಿಂದ ರೈತರು ಎದುರಿಸುತ್ತಿರುವ ಸಮಸ್ಯೆ ತಿಳಿದುಕೊಳ್ಳಬಹುದು. ಹೀಗಾಗಿ ತಿಂಗಳಲ್ಲಿ ಮೂರು ದಿನ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ ಎಂದ ಅವರು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡ ಬಳಿಕ ರೈತರ ಸಮಸ್ಯೆ ಆಲಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡುತ್ತೇನೆ ಎಂದು ತಿಳಿಸಿದರು.