ರಾಯಚೂರು,ಸೆ.೨೫- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅವಕಾಶವಾದಿ ರಾಜಕಾರಣಿ, ಅವರು ಸಿದ್ದಾಂತದ ಮೇಲೆ ರಾಜಕಾರಣ ಮಾಡಬೇಕು ಹೊರತು ರಾಜಕೀಯ ಲಾಭಕ್ಕಾಗಿ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ರಾಯಚೂರು ಗ್ರಾಮೀಣ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದಲ್ಲಿ ಜನಸ್ನೇಹಿ ಆಡಳಿತವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಜನರ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹಾರ ನೀಡಲು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಜನತಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಹಿಂದಿನ ಸರಕಾರವು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು, ಆದರೆ
ಸರಿಯಾದ ಕೆಲಸ ಮಾಡದೆ ಜನರಲ್ಲಿ ವಿಫಲವಾಗಿದ್ದರಿಂದ ನಮ್ಮ ಸರಕಾರ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.
ನಾನು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯಿಂದ ಕಲಬುರ್ಗಿಯ ನನ್ನ ಕಚೇರಿಗೆ ಸಾಕಷ್ಟು ಜನರು ಬರುತ್ತಿದ್ದಾರೆ. ನಾನು ಕೆಲಸ ಮಾಡಿ ಕೊಡುವ ಪ್ರಯತ್ನ ಮಾಡಿದ್ದೇನೆ.
ಮೇಕೆದಾಟು ಯೋಜನೆ ಜಾರಿ ಮಾಡಲು ಸುಪ್ರೀಂಕೋರ್ಟ್ ಯಾವುದೇ ಅಡ್ಡಿ ಎಂದು ಹೇಳಾಗಿದೆ. ಅದರಂತೆ ಕಾವೇರಿ ವಿಚಾರಕ್ಕೆ ಸಂಬಂದಿಸಿಂಡತೆ ನದಿಯಲ್ಲಿ ನೀರಿಲ್ಲದೆ ಇರುವುದರಿಂದ ಸಮಸ್ಯೆ ಎದುರಾಗಿದೆ ತ್ವರಿತವಾಗಿ ಸರಕಾರ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಬರಗಾಲ ವಿಚಾರಕ್ಕೆ ಸಂಬಂಧಿಸಿದಂತೆ ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲು ಮುಂದಾಗುತ್ತೇನೆ.ಕೇಂದ್ರಕ್ಕೆ ಬರಗಾಲದ ಪರಿಹಾರ ಕೇಳಲು ನಮ್ಮ ಸರಕಾರ ಮುಂದಾಗಿದೆ ಎಂದರು.