ಎಚ್ ನಾಗೇಶಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು, ಜ. 13- ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್ ನಾಗೇಶ್ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಗಿರಿಯನ್ನು ದಯಪಾಲಿಸಿ ಅವರನ್ನು ಸಮಾಧಾನ ಗೊಳಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಅಬಕಾರಿ ಸಚಿವರಾಗಿದ್ದ ನಾಗೇಶ್ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಅವರು ಸಚಿವಸ್ಥಾನಕ್ಕೆ ನೀಡಿದ ಜೀನಾಮೆಯನ್ನು ಅಂಗೀಕರಿಸಿದ ಬೆನ್ನಲ್ಲೇ ಅವರಿಗೆ ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಟಿಪ್ಪಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಿಹಾಕಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮುನಿಕೃಷ್ಣ ಅವರಿಗೆ ಎಂಸಿಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.