ಎಡಗೈ ಅಪಘಾತಕ್ಕೆ ಕಾರಣ  ಜೊತೆಯಾದ  ರಾಧಿಕಾ ನಾರಾಯಣ್

ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರೀಕರಣ ಭರದಿಂದ ನಡೆಯುತ್ತಿದೆ.

ಸಮರ್ಥ್ ಬಿ ಕಡಕೊಳ್ ನಿರ್ದೇಶನದ  ಚೊಚ್ಚಲ ಸಿನಿಮಾ ಇದಾಗಿದೆ. ಇತ್ತೀಚೆಗೆ ಚಿತ್ರತಂಡದ ಜೊತೆ ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ದರು. ಇದೀಗ ಮತ್ತೊಬ್ಬ ನಟಿ ರಾಧಿಕಾ ನಾರಾಯಣ್ ಜೊತೆಯಾಗಿದ್ದಾರೆ.

 ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಸಿನಿಮಾ ಬಗೆಗಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ.

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು  ಚಿತ್ರ ಒಳಗೊಂಡಿದೆ. ಬ್ಲ್ಯಾಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಚಿತ್ರದಲ್ಲಿದೆ.  ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ.

ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.