ಎಡಿಜಿಪಿ ಅಲೋಕ್ ಭೇಟಿ

ಕೋಲಾರ, ಏ ೩- ವಿಧಾನಸಭಾ ಚುನಾವಣೆ ಹಿನ್ನಲೆ ನಗರದಲ್ಲೆಡೆ ಸಂಚಾರ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು ಕೋಲಾರದ ಕ್ಲಾಕ್ ಟವರ್ ಸೇರಿದಂತೆ ಕೆಲ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಯಾವುದೇ ಗಲಾಟೆಗಳಿಗೆ ಆಸ್ಪದ ನೀಡದಂತೆ ಎಸ್ಪಿಗೆ ಸೂಚನೆ ನೀಡಿದರು.
ಐಜಿಪಿ ರವಿಕಾಂತೇಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಸ್ಪಿ ನಾರಾಯಣ, ಸಿಇಒ ಯುಕೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.