
ಕುಣಿಗಲ್, ಮೇ ೧೬- ತಾಲ್ಲೂಕಿನ ಇತಿಹಾಸ ಪ್ರಸಿದ್ದ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ನೂತನ ಶಾಸಕ ಬಿ.ವೈ. ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದರು. ತಾಲ್ಲೂಕಿನ ಶ್ರೀ ಎಡೆಯೂರು ಸಿದ್ದಲಿಂಗೇಶ್ವರ ಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಮನೆಯ ದೇವರಾದ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.