ಎದೆ ನೋವು ರಾಷ್ಟ್ರಪತಿ ಆಸ್ಪತ್ರೆಗೆ ದಾಖಲು

ನವದೆಹಲಿ, ಮಾ. ೨೬- ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಮಾನಾಥ್ ಕೋವಿಂದ್ ಅವರು, ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಷ್ಟ್ರಪತಿಗಳ ಆರೋಗ್ಯ ಕುರಿತಂತೆ ಮಾಹಿತಿ ನೀಡಿರುವ ವೈದ್ಯರು ಅವರ ಸ್ಥಿತಿ ಸ್ಥಿರವಾಗಿರುವುದಾಗಿ ತಿಳಿಸಿದ್ದಾರೆ. ಎದೆನೋವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅವರನ್ನು ದೆಹಲಿಯ ಸೇನೆಯ ಸಂಶೋಧನೆ ಮತ್ತು ರೆಫೆರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು, ರಮಾನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿರುವುದನ್ನು ದೃಢಪಡಿಸಿದ್ದಾರೆ.