ಎನ್‌ಎಸ್‌ಯುಐನಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯ

ಕೋಲಾರ,ಜು.೩೧- ರೈತರು, ಕೂಲಿ ಕಾರ್ಮಿಕರು ಮಧ್ಯಮ ವರ್ಗ ಹಾಗೂ ಬಡವರು ಹೆಚ್ಚಾಗಿರುವ ಕೋಲಾರ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಗತ್ಯವಿದ್ದು ಸಚಿವರು ಕೊಡಲೇ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಕೊಡಬೇಕಾಗಿ ಎನ್.ಎಸ್.ಯು.ಐ ಘಟಕದ ಜಿಲ್ಲಾಧ್ಯಕ್ಷ ಭರತ್ ರಾಯ್ ನೇತೃತ್ವದ ನಿಯೋಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಸಲ್ಲಿಸಿದರು.
ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿದ ಭಾರತ ರಾಷ್ಟ್ರೀಯ ವಿಧ್ಯಾರ್ಥಿ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು, ಕೋಲಾರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು ಸುಸಜ್ಜಿತವಾದ ಆಸ್ಪತ್ರೆ ಇಲ್ಲದೇ ಜನತೆ ಖಾಸಗಿ ಆಸ್ಪತ್ರೆ ಅಥವಾ ಬೆಂಗಳೂರಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಅವಲಂಬಿಸಬೇಕಾಗಿದೆ. ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಮಧ್ಯಮ ವರ್ಗದ ಜನರು ಹೆಚ್ಚಾಗಿರುವ ಕಾರಣ ದುಬಾರಿ ವೆಚ್ಚದ ಆರೋಗ್ಯ ಚಿಕಿತ್ಸೆ ಪಡೆಯಲು ಸಾಧ್ಯವಾಗದೇ ಜನರು ತ್ರೀವ ಸಂಕಷ್ಟ ಪಡುತ್ತಿದ್ದಾರೆ.
ಜಿಲ್ಲೆಯಲ್ಲಿ ಸುಸಜ್ಜಿತವಾದ ಆಧುನಿಕ ಆರೋಗ್ಯ ಉಪಕರಣಗಳು ಒಳಗೊಂಡ ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ಆರೋಗ್ಯ ಭಾಗ್ಯ ಸಿಗುತ್ತದೆ ತಾವುಗಳು ಕೋಲಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಕ್ರಮಕೈಗೊಳ್ಳಬೇಕೆಂದು ಸಚಿವರಿಗೆ ವಿಧ್ಯಾರ್ಥಿ ಸಂಘಟನೆ ಸದಸ್ಯರು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಎನ್.ಎಸ್.ಯು.ಐ ವಿಧ್ಯಾರ್ಥಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಿಯಾಜ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷ್, ಅಸೀಫ್ ಅಹಮದ್ ತಾಲ್ಲೂಕು ಆಧ್ಯಕ್ಷರು ಎನ್‌ಎಸ್‌ಯುಐ, ಕಾಂಗ್ರೆಸ್ ಮುಖಂಡರಾದ ಸೋಮಶೇಖರ್, ಸೈಫ್ ಹಾಜರಿದ್ದರು.