ಎನ್‌ಐಎ ದಾಳಿ ವಿರುದ್ಧ ಪ್ರತಿಭಟನೆ;ಆರಗ ಖಂಡನೆ

ಬೆಂಗಳೂರು,ಸೆ.೨೨- ದೇಶದಲ್ಲಿ ಭಯೋತ್ಪಾದಕರನ್ನು ಹುಟ್ಟುಹಾಕಿದ್ದು ಉಗ್ರಗಾಮಿಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಿಡಿ ಕಾರಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಮೇಲೆ ಎನ್‌ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಏಕತೆ, ಸಮಗ್ರತೆ ಹಾಳು ಮಾಡುವ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದೆ. ಸಂಘಟನೆಯ ಕೆಲ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ನಾನು ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸ್ತೇನೆ.ಶಿವಮೊಗ್ಗ ಪ್ರಕರಣದಲ್ಲಿ ಬಾಂಬ್ ತಯಾರಿಸಿ ಅದನ್ನು ಟ್ರಯಲ್ ಕೂಡ ಮಾಡಿದ್ದಾರೆ. ಅವರ ಬಂಧನದಿಂದ ರಕ್ತಹಾನಿ ಜೀವಹಾನಿ ತಡೆಗಟ್ಟಲಾಗಿದೆ.
ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲರೂ ಕಾನೂನು ಪಾಲಿಸಬೇಕು. ತಪ್ಪಿತಸ್ಥರು ಅಲ್ಪಸಂಖ್ಯಾತರೋ ಇಲ್ವೋ ಎಂದು ಪೊಲೀಸರು ಕೆಲಸ ಮಾಡಲು ಆಗಲ್ಲ ಎಂದು ಸ್ಪಷ್ಟಪಡಿಸಿದರು.
ಸಂಘಟನೆ ನಿಷೇಧ ಮಾಡಿದರೆ ವ್ಯಕ್ತಿಗಳ ರಾಕ್ಷಸ ಮನೋಭಾವ ಬದಲಾಗೋದಿಲ್ಲ. ಶಿವಮೊಗ್ಗದ ಶಾರಿಕ್ ಸ್ಯಾಟಲೈಟ್ ಫೋನ್ ನಲ್ಲಿ ಮಾತನಾಡಿದ್ದಾನೆ. ತಲೆಮರೆಸಿಕೊಂಡ ಆತನನ್ನು ಪತ್ತೆ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸರಿಗೆ ಹೇಗೆ ಹ್ಯಾಟ್ಸ್ ಆಫ್ ಸಲ್ಲಿಸಬೇಕೋ ಗೊತ್ತಾಗ್ತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ