ಎನ್‌ಡಿಎ ೧೫೦ ಸೀಟು ಗೆಲ್ಲಲ್ಲ

ಗಾಜಿಯಾಬಾದ್,ಏ.೧೭- ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸುಮಾರು ೧೫-೨೦ ದಿನಗಳ ಹಿಂದೆ, ಬಿಜೆಪಿ ಸುಮಾರು ೧೮೦ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಭಾವಿಸಿದ್ದೆ. ಈಗ ಬಿಜೆಪಿ ಮತ್ತವರ ಮೈತ್ರಿಕೂಟ ೧೫೦ ಸ್ಥಾನದ ಹಾಜು ಬಾಜಿನಲ್ಲಿ ಸ್ಥಾನ ಪಡೆಯಬಹುದು ಎಂದು ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ
ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜೊತೆಗೆ ಉತ್ತರ ಪ್ರದೇಶದಲ್ಲಿ ಬಲಿಷ್ಠವಾದ ಮೈತ್ರಿ ಇದೆ. ಇಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರದ್ದಾದ ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೇಲೆ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಚುನಾವಣಾ ಬಾಂದ್ “ವಿಶ್ವದ ಅತಿ ದೊಡ್ಡ ಸುಲಿಗೆ ಯೋಜನೆ” ಜೊತೆಗೆ ಪ್ರಧಾನಿ ನರೇಂದ್ರ ಮೋದಿ “ಭ್ರಷ್ಟಾಚಾರದ ಚಾಂಪಿಯನ್” ಎಂದು ಕಿಡಿಕಾರಿದರು.
ಪಾರದರ್ಶಕತೆಗಾಗಿ, ಸ್ವಚ್ಛ ರಾಜಕಾರಣಕ್ಕಾಗಿ ಚುನಾವಣಾ ಬಾಂಡ್‌ಗಳ ವ್ಯವಸ್ಥೆ ತರಲಾಗಿದೆ ಎಂದು ಪ್ರಧಾನಿ ಹೇಳುತ್ತಾರೆ, ಇದು ನಿಜವಾಗಿದ್ದರೆ, ಸುಪ್ರೀಂಕೋರ್ಟ್ ಆ ವ್ಯವಸ್ಥೆಯನ್ನು ಏಕೆ ರದ್ದುಗೊಳಿಸಿತು ಮತ್ತು ಎರಡನೆಯದಾಗಿ, ನೀವು ಪಾರದರ್ಶಕತೆ ತರಲು ಬಯಸಿದರೆ, ಬಿಜೆಪಿಗೆ ಹಣ ನೀಡಿದವರ ಹೆಸರನ್ನು ಯಾಕೆ ಮರೆಮಾಚುತ್ತಿದ್ದೀರಾ ಎಂದು ಪ್ರಶ್ನಿಸಿದ್ಧಾರೆ
ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ಅನುಮತಿಸುವ ಚುನಾವಣಾ ಬಾಂಡ್‌ಗಳ ಯೋಜನೆಯನ್ನು “ಅಸಂವಿಧಾನಿಕ” ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಎದುರಿಸಲು ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿದೆ

ಅಮೇಥಿಯಿಂದ ಸ್ಪರ್ಧೆ
ಕೇರಳದ ವಯನಾಡ್‌ನಿಂದ ಎರಡನೇ ಬಾರಿಗೆ ಆಯ್ಕೆ ಬಯಸಿ ಸ್ಪರ್ಧೆ ನಡೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಕುಟುಂಬದ ಭದ್ರಕೋಟೆ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.ಅಮೇಥಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷದ ಚುನಾವಣಾ ಸಮಿತಿ ನಿರ್ಧರಿಸಲಿದೆ. ಪಕ್ಷ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧ ಎಂದು ಪರೋಕ್ಷವಾಗಿ ಅಮೇಥಿಯಿಂದ ಸ್ಪರ್ಧೆ ಮಾಡುವುದನ್ನು ಖಚಿತ ಪಡಿಸಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೇಥಿಯಿಂದ ಸ್ಪರ್ಧೆ ಮಾಡುತ್ತೀರಾ ಎನ್ನುವ ಪ್ರಶ್ನಗೆ ಇದು ಉತ್ತಮ ಪ್ರಶ್ನೆ, ಖಂಡಿತಾ ನಿಮ್ಮ ಪ್ರಶ್ನೆ ಅಲ್ಲ ಬಿಜೆಪಿಯದು ಎನ್ನುವುದು ಗೊತ್ತಿದೆ. ಪಕ್ಷ ಹೇಳಿದ ಕಡೆ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ
ಕಳೆದ ಲೋಕಸಭಾ ಕ್ಷೇತ್ರದಿಂದ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಸೋತ ಕ್ಷೇತ್ರವನ್ನು ಮರಳಿ ಪಡೆಯಲು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಸ್ಪರ್ಧೆ ಮಾಡುವ ಸುಳಿವು ನೀಡಿದ್ದಾರೆ.ರಾಹುಲ್ ಗಾಂಧಿ ಅವರು ೨೦೦೪ ರಿಂದ ಸತತ ಮೂರು ಬಾರಿ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು ೨೦೧೯ ರಲ್ಲಿ ೫೫,೦೦೦ ಮತಗಳಿಂದ ಪರಾಭವಗೊಂಡಿದ್ದರು. ಕಳೆದುಕೊಂಡ ಕೇತ್ರ ಮರಳಿ ಪಡೆಯಲು ಕಸರತ್ತು ನಡೆಸಿದ್ದಾರೆ
ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರ ಭದ್ರಕೋಟೆಯಾಗಿದ್ದ ಅಮೇಥಿ ಕ್ಷೇತ್ರದಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಪರಾಭವಗೊಂಡಿದ್ದರು