ಎನ್‍ಪಿಎಸ್‍  ಯೋಜನೆಯನ್ನು ರದ್ದುಗೊಳಿಸಲು‌ ಒತ್ತಾಯ

ಹರಪನಹಳ್ಳಿ.ನ.೧೯; : ಹೊಸ ಪಿಂಚಣಿ ಎನ್‍ಪಿಎಸ್‍  ಯೋಜನೆಯನ್ನು ರದ್ದುಗೊಳಿಸಿ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಸರ್ಕಾರಿ ನೌಕರರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ಬಹಿರಂಗ ಸಭೆ ಮೂಲಕ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ರಾಜ್ಯ ಕಾರ್ಯದರ್ಶಿ ರಮೇಶ್ ನಾಯ್ಕ ಮಾತನಾಡಿ, ಹೊಸ ಪಿಂಚಣಿ ವ್ಯಾಪ್ತಿಯಲ್ಲಿರುವ ಎಲ್ಲ ನೌಕರರನ್ನು ಹಳೆಯ ನಿಶ್ಚಿತ ಪಿಂಚಣಿ ಯೋಜನೆ ವ್ಯಾಪ್ತಿಗೆ ತರಬೇಕು. ಒಂದು ವೇಳೆ ನಿಶ್ಚಿತ ಪಿಂಚಣಿ ಜಾರಿ ಮಾಡದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಬಳಿಗನೂರು ಕೊಟ್ರೇಶ್, ತಾಲ್ಲೂಕು ಕಾರ್ಯದರ್ಶಿ ಡಿ.ಎಚ್.ಅರುಣ್ ಕುಮಾರ, ದೊಡ್ಡ ಬಸವರಾಜ್, ಹರ್ಷಕುಮಾರ್, ಕವಿತ, ಸುರೇಶ್, ಬಸವರಾಜ್, ಜಗದೀಶ್ ಇದ್ದರು.