ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಪವಾರ್ ರಾಜೀನಾಮೆ

ಮುಂಬೈ,ಮೇ.೨-ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ- ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದಾಗಿ ಪ್ರಕಟಿಸಿದ್ದಾರೆ.
ನಾಲ್ಕು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿ, ಕೇಂದ್ರ ರಕ್ಷಣಾ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಪವಾರ್ ಅವರು ೨೦೧೯ ರ ನಂತರ ಮಹಾ ವಿಕಾಸ್ ಅಘಾಡಿ- ಎಂವಿಎ ಸರ್ಕಾರ ರಚಿಸಲು ಎನ್‌ಸಿಪಿ, ಕಾಂಗ್ರೆಸ್ ಮತ್ತು ನಂತರ ಸೈದ್ಧಾಂತಿಕವಾಗಿ ಶಿವಸೇನೆಯ ವಿರುದ್ಧದ ಅಸಂಭವ ಒಕ್ಕೂಟವನ್ನು ಒಟ್ಟಿಗೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಈ ಕುರಿತು ಹೇಳಿಕೆ ನೀಡಿರು ಶರದ್ ಪವಾರ್, ವಯಸ್ಸು ಮತ್ತು ಅನಾರೋಗ್ಯದಿಂದ ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಕಟಿಸಿದ್ದಾರೆ ಎಂದು ಹೇಳಲಾಗಿದೆ.
ಆಂತರಿಕೆ ಬೆಳವಣಿಗೆ ಕಾರಣ
ಬಿಜೆಪಿ ಜೊತೆ ಸೇರಿ ಮತ್ತೆ ಸರ್ಕಾರ ರಚಿಸಲು ಮುಂದಾಗಿರುವ ಸೋದರ ಸಂಬಂಧಿ ಅಜಿತ್ ಪವಾರ್ ಮುಂದಾಗಿರುವ ಹಿನ್ನೆಲೆಯಲ್ಲಿ
ಪಕ್ಷದ ಆಂತರಿಕ ಬಿರುಕುಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಪಕ್ಷದ ಕೆಲವು ಶಾಸಕರು ಬಿಜೆಪಿಗೆ ಸೇರಬಹುದು ಎಂಬ ಊಹಾಪೊಹಗಳು ಹರಿದಾಡುತ್ತಿವೆ.ಇದರ ನಡುವೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶರದ್ ಪವಾರ್ ಪ್ರಕಟಿಸಿದ್ದಾರೆ.ಎನ್ ಸಿಪಿಯನ್ನು ಒಡೆಯಲು ಅವಕಾಶ ಮಾಡಿಕೊಡುವುದಿಲ್ಲ ಯಾರಾದರೂ ಒಡೆಯಲು ಪ್ರಯತ್ನಿಸಿದರೆ, ನಿಮ್ಮ “ದೃಢ ನಿಲುವು” ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪವಾರ್ ನಂತರ ಪಕ್ಷದ ಮುಖ್ಯಸ್ಥ ಸ್ಥಾನ ಯಾರು ಅಲಂಕರಿಸಲಿದ್ದಾರೆ ಎಂಬ ಬಗ್ಗೆ ಇನ್ನೂ ಯಾವುದೇ ಘೋಷಣೆಯಾಗಿಲ್ಲ.