`ಎನ್‌ಡಿಎ’ಗೆ ೭ ವರ್ಷ ಕಿಟ್-ಸಿಹಿ ವಿತರಣೆ

ಪುತ್ತೂರು, ಮೇ ೩೦- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ೭ ವರ್ಷ ಪೂರೈಸುವ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾ ಮತ್ತು ನಗರ ಮಂಡಲದ ವತಿಯಿಂದ ಪೌರ ಕಾರ್ಮಿಕರಿಗೆ ಆಹಾರದ ಕಿಟ್ ಮತ್ತು ಸಿಹಿ ತಿಂಡಿ ವಿತರಣೆಯನ್ನು ಶನಿವಾರ ಮಾಡಲಾಯಿತು.

ಶಾಸಕ ಸಂಜೀವ ಮಠಂದೂರು ಅವರು ಪೌರ ಕಾರ್ಮಿಕರಿಗೆ ಸಾಂಕೇತಿಕವಾಗಿ ಆಹಾರದ ಕಿಟ್ ವಿತರಿಸಿ ಮಾತನಾಡಿ ಜನರ ಸೇವೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರ ಒಂದಷ್ಟು ಸವಲತ್ತುಗಳನ್ನು ಕೊಡುತ್ತದೆ. ಇಂತಹ ಸಂದರ್ಭದಲ್ಲಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಪೌರ ಕಾರ್ಮಿಕರು ಉತ್ತಮ ಪೌಷ್ಟಿಕ ಆಹಾರ ಸೇವಿಸುವುದು ಅಗತ್ಯ ಎಂದು ಗಮನದಲ್ಲಿರಿಸಿಕೊಂಡು ಬಿಜೆಪಿ ಹಿಂದುಳಿದ ಮೋರ್ಚಾ ವತಿಯಿಂದ ಈ ಕೊಡುಗೆ ನೀಡಲಾಗುತ್ತಿದೆ. ರಾಜಕಾರಣ ಬದಿಗಿಟ್ಟು ಸೇವೆಗೆ ಮಹತ್ವ ಕೊಡುವುದು ನಮ್ಮ ಗುರಿ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಧ್ಯೇಯ ವಾಕ್ಯದಂತೆ ಜನರ ಆರೋಗ್ಯ ಮುಖ್ಯ ಎಂದರು. 

 ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷ ಆರ್.ಸಿ.ನಾರಾಯಣ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆ ಸದಸ್ಯೆ ಯಶೋದಾ ಹರೀಶ್, ಬಿಜೆಪಿ ಹಿಂದುಳಿದ ಮೋರ್ಚಾದ ನಗರ ಅಧ್ಯಕ್ಷ ಶಿವರಾಮ ಸಪಲ್ಯ ಉಪಸ್ಥಿತರಿದ್ದರು.