ಎನ್‍ಇಕೆಆರ್‍ಟಿಸಿ ಬಸ್ ಚಾಲಕರಿಗೆ ಕೋವಿಡ್ ಲಸಿಕೆ

ಬಳ್ಳಾರಿ,ಜೂ.09 : ಜಿಲ್ಲಾಡಳಿತ, ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಆರೋಗ್ಯ ಇಲಾಖೆ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಗರದ ಕೇಂದ್ರ ಹೊಸ ಬಸ್ ನಿಲ್ದಾಣದಲ್ಲಿ ಆಟೋ ಹಾಗೂ ಎನ್‍ಇಕೆಆರ್‍ಟಿಸಿ ಚಾಲಕರಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸೋಮವಾರ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಮೊದಲನೆಯ ಆದ್ಯತೆಯಾಗಿ ಲಸಿಕೆ ಹಾಕಿಸಿಕೊಳ್ಳುವುದರಿಂದ ಎಲ್ಲಾ ವರ್ಗದ ನಾಗರಿಕರು ಸುರಕ್ಷಿತರಾಗಿರುತ್ತಾರೆ, ಎಲ್ಲರು ಭಯ ಬಿಟ್ಟು ಲಸಿಕೆ ಹಾಕಿಸಿಕೊಳ್ಳಿ, ಕೋವಿಡ್ ನಿಯಂತ್ರಿಸಲು ಸಾರ್ವಜನಿಕರು ಸಹಕರಿಸಿ ಎಂದರು.
ಆಟೋ ಚಾಲಕರು ಮತ್ತು ಎನ್‍ಇಕೆಆರ್‍ಟಿಸಿ ಸೇರಿದಂತೆ 270 ಜನ ಚಾಲಕರಿಗೆ ಕೋವಿಡ್ ಲಸಿಕೆಯ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ್ ಸಹಾಯಕ ಆಯುಕ್ತರಾದ ರಮೇಶ್ ಕೋನರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಶೇಖರ್, ತಹಸೀಲ್ದಾರರಾದ ರೆಹಮಾನ್ ಪಾಷ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅನಿಲ್‍ಕುಮಾರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಮೋಹನ್‍ಕುಮಾರಿ ಮತ್ತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ ಷಕೀಬ್, ಆಟೋ ಚಾಲಕರ ಸಂಘದ ಅಧ್ಯಕ್ಷರಾದ ರಮೇಶ್ ಹುಂಡೆಕರ್ ಹಾಗೂ ಇತರರು ಇದ್ದರು.