ಎನ್‍ಎಸ್‍ಎಸ್ ರಾಜ್ಯ ಪ್ರಶಸ್ತಿಗೆ ಹೆಚ್.ಪಿ.ತಿಪ್ಪೇಶ ಆಯ್ಕೆ


ಚಿತ್ರದುರ್ಗ,ಅ.14: 2017-18ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಗೆ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಎನ್‍ಎಸ್‍ಎಸ್ ಸ್ವಯಂ ಸೇವಕ ಹೆಚ್.ಪಿ.ತಿಪ್ಪೇಶ ಆಯ್ಕೆಯಾಗಿದ್ದಾರೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ವತಿಯಿಂದ ಈಚೆಗೆ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ.ನಾರಾಯಣಗೌಡ ಅವರು ಪ್ರಶಸ್ತಿ ಪ್ರಧಾನ ಮಾಡಿದರು.ರಾಷ್ಟ್ರೀಯ ಸೇವಾ ಯೋಜನೆಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು 2017-18ನೇ ಸಾಲಿನ “ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ” ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.