ಎನ್‍ಎಸ್‍ಯುಐನಿಂದ ನಾಳೆ ವಿವೇಕಾನಂದರ ಜನ್ಮದಿನಾಚರಣೆ

ದಾವಣಗೆರೆ.ಜ.೧೧ : ದಾವಣಗೆರೆ ಜಿಲ್ಲಾ ಎನ್‍ಎಸ್‍ಯುಐ ಆಶ್ರಯದಲ್ಲಿ ಎ.ವಿ.ಕಮಲಮ್ಮ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ಜ.12 ರಂದು ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 12-00 ಗಂಟೆಗೆ ನಗರದ ಎ.ವಿ.ಕೆ.ಕಾಲೇಜು ಆವರಣದ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮಿನ್‍ಮಟ್ಟು ಅವರು ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡುವರು. ಎ.ವಿ.ಕಮಲಮ್ಮ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಬಿ.ಪಿ.ಕುಮಾರ್ ಅವರು ಅಧ್ಯಕ್ಷತೆ ವಹಿಸುವರು. ಎ.ವಿ.ಕಮಲಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಬಿ.ಶಿವನಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಎನ್‍ಎಸ್‍ಯುಐ ಅಧ್ಯಕ್ಷ ಅಲಿ ರೆಹಮತ್ ಮತ್ತಿತರರು ಭಾಗವಹಿಸುವರು.