ಎನ್.ಎಸ್.ಎಸ್.ಕೆ ಕಾರ್ಖಾನೆಯಲ್ಲಿ ಗಣರಾಜ್ಯೋತ್ಸವ

ಬೀದರ್:ಜ.26: ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ, ಇಮಾಮಪೂರ, ಬೀದರ ಕಾರ್ಖಾನೆಯ ಆಡಳಿತ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಖಾನೆಯ ಅಧ್ಯಕ್ಷ ಡಿ.ಕೆ. ಸಿದ್ರಾಮ ರವರು 75ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡುತ್ತ ಡಾ॥ ಬಾಬಾ ಸಾಹೇಬ ಅಂಬೇಡ್ಕರ ರವರನ್ನು ಸ್ಮರಿಸುತ್ತಾ ಇಂದು ಬಾಬಾ ಸಾಹೇಬ ಅಂಬೇಡ್ಕರ ಅವರು ನಮ್ಮ ದೇಶಕ್ಕೆ ಉತ್ತಮ ರೀತಿಯ ಸಂವಿಧಾನ ನೀಡಿದ ಪರಿಣಾಮವಾಗಿ ಇಂದು ದೇಶವು ಕಾನೂನು ಬದ್ಧವಾಗಿ ಹಾಗೂ ಶಾಂತಿಯಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.
ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯು ಇಡಿ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ದಿ. ಡಾ|| ಗುರುಪಾದಪ್ಪ ನಾಗಮಾರಪಳ್ಳಿಯವರ ದೂರದೃಷ್ಟಿಯ ಪರಿಣಾಮವಾಗಿ ಡಿಸಿಸಿ ಬ್ಯಾಂಕ್ ಸ್ಥಾಪಿಸಿದರು. ಇದರಿಂದಾಗಿ ಜಿಲ್ಲೆಯಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಗಳು ಹುಟ್ಟಿಕೊಂಡು ರೈತರ ಸೇವೆಯಲ್ಲಿ ತೊಡಗಿಸಿಕೊಂಡಿವೆ. ಜಿಲ್ಲೆಯ ಎಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಖಾನೆಯ ಎಲ್ಲಾ ಸಿಬ್ಬಂದಿಗಳು ಉತ್ತಮ ರೀತಿಯಿಂದ ಕಾರ್ಯನಿರ್ವಹಿಸುತ್ತಿದ್ದು ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾದ ಶ್ರೀ ಉಮಾಕಾಂತ ನಾಗಮಾರಪಳ್ಳಿ, ಕಾರ್ಖಾನೆಯ ಉಪಾಧ್ಯಕ್ಷರಾದ ಶ್ರೀ ಬಾಲಾಜಿ ಚವ್ಹಾಣ, ಕಾರ್ಖಾನೆಯ ಎಲ್ಲಾ ನಿರ್ದೇಶಕರು, ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.