ಎನ್.ಎಸ್.ಬೋಸರಾಜುಗೆ ಟಿಕೆಟ್ ಘೋಷಣೆ ಮಾಡಲಿ

ರಾಯಚೂರು,ಏ.೧೭- ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ನ್ನು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಅವರಿಗೆ ನೀಡಬೇಕು ಎಂದು ಕೆಪಿಸಿಸಿ ಸದಸ್ಯ ಪಾರಸಮಲ್ ಸುಖಾಣಿ ಅವರು ಆಗ್ರಹಿಸಿದರು.
ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ನಾವು ಅಲ್ಪಸಂಖ್ಯಾತರ ಸಮುದಾಯದ ವಿರೋಧಿಗಳಲ್ಲ.ಪಕ್ಷದ ಆಂತರಿ ಸಮೀಕ್ಷೆಯಲ್ಲಿ ಬೋಸರಾಜು ಅವರು ಮುಂದೆ ಇದ್ದಾರೆ.ಹೀಗಾಗಿ ಕೇತ್ರಕ್ಕೆ ಕೂಡಲೇ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು.ಬಿಜೆಪಿಗೆ ಅಭ್ಯರ್ಥಿಯನ್ನು ಸೋಲಿಸಬೇಕಾದರೆ ಬೋಸರಾಜು ಅವರಿಂದ ಮಾತ್ರ ಸಾಧ್ಯ ಈ ದಿಸೆಯಲ್ಲಿ ವಿಳಂಬ ಮಾಡಬಾರದು ಎಂದು ಹೇಳಿದರು.
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರು ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಎಲ್ಲಾ ಸಮುದಾಯದವರು ಬಯಸುತ್ತಿರುವುದು ಬಿಜೆಪಿ ಪಕ್ಷವನ್ನು ಬೇರು ಸಮೇತ ಕಿತ್ತು ಹಾಕಬೇಕು.ಎಂದು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಗೆಲ್ಲುವಂತ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಬೇಕು.ಈಗಾಗಲೇ ಜಿಲ್ಲೆಯ ೫ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.ಆದರೆ ರಾಯಚೂರು ನಗರ ಹಾಗೂ ಲಿಂಗಸೂಗೂರು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡದೇ ಇರುವುದರಿಂದ ಗೊಂದಲದ ವಾತಾವರಣವಾಗಿದ್ದು ಕೂಡಲೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರ ಬ್ಲಾಕ್ ಸಮಿತಿ ಅಧ್ಯಕ್ಷ ಜಿ.ಬಸವ ರಾಜರೆಡ್ಡಿ, ಕೆ.ಶಾಂತಪ್ಪ, ಜಯಣ್ಣ, ರುದ್ರಪ್ಪ ಅಂಗಡಿ,ರಾಮಣ್ಣ ಇರಬಗೇರಾ, ಪಾಮಯ್ಯ ಮುರಾರಿ,ಬಷೀರುದ್ದೀನ್,ವೈ .ಶ್ರೀಕಾಂತ, ಜಾವೀದ್ ಹುಲ್ ಹಕ್, ದೊಡ್ಡ ಬಸಪ್ಪಗೌಡ, ಕಿರಿಗಲಿಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.