ಎನ್.ಪಿ.ಎಸ್ ರದ್ದಿಗೆ ಎಕೆಎಸ್.ಜಿಇಎಫ್ ಆಗ್ರಹ

ರಾಯಚೂರು,ಮಾ.೧೪- ಎನ್.ಪಿ.ಎಸ್ ಪದ್ಧತಿ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಪದ್ಧತಿ ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನಿವಿ ಒತ್ತಾಯಿಸಿದರು.
ಶೇ.೧೭ರಷ್ಟು ಮಧ್ಯಂತರ ಪರಿಹಾರವನ್ನು ದಿ. ೧.೭.೨೦೨೨ರಿಂದ ಅನ್ವಯವಾಗುವಂತೆ ನೀಡುಬೇಕು ಹಾಗೂ ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಕೂಡಲೇ ಪಡೆದು ಶೇ.೪೦ರಷ್ಟು ವೇತನ ಹೆಚ್ಚಳವನ್ನು ಜಾರಿಗೊಳಿಸಬೇಕು.ರಾಜ್ಯದಲ್ಲಿ ಸುಮಾರು ೨.೮೦ ಲಕ್ಷ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು.ಆಡಳಿತ ಸುಧಾರಣೆ ನೆಪದಲ್ಲಿ ಶಿಫಾರಸ್ಸು ಮಾಡಲಾಗಿರುವ ಹುದ್ದೆಗಳ ಕಡಿತವನ್ನು ಮತ್ತು ಸರ್ಕಾರಿ ಸೇವೆಗಳ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಸಂವಿಧಾನದತ್ತವಾಗಿ ಸಿಗಬೇಕಾಗಿರುವ ಸೌಲಭ್ಯಗಳನ್ನು ವಿಳಂಬವಿಲ್ಲದೇ ನೀಡಬೇಕು.ಹೊರಗುತ್ತಿಗೆ, ಗುತ್ತಿಗೆ ದಿನಗೂಲಿ ನೌಕರರಿಗೆ ,ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರುಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಎಲ್ಲಾ ನೇರ ನೇಮಕಾತಿಯಲ್ಲಿ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.
ಕೋವಿಡ್ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ೧೮ ತಿಂಗಳ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವರ್ಗಾವಣೆ ಸಮಸ್ಯೆಗಳನ್ನು ಬಗೆಹರಿಸಬೇಕು.ವೃಂದ ಮತ್ತು ನೇಮಕಾತಿ ನಿಯಮಗಳ ರಚನೆ,ಶಾಲೆಗಳನ್ನು ಮುಚ್ಚುವುದು,ಶಿಕ್ಷಕರ ಹುದ್ದೆಗಳ ಕಡಿತವನ್ನು ಕೈಬಿಡಬೇಕು.ಸಾರ್ವಜನಿಕ ಉದ್ದಿಮೆಗಳ ಹಾಗೂ ನಿಗಮ ಮಂಡಳಿಗಳ ಸೇವೆಗಳ ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ತಾಯಪ್ಪ, ಮೋಹಿನುದ್ದೀನ್, ನಾರಾಯಣ, ಅಮರೇಶಪ್ಪ, ವಿಜಯಕುಮಾರ,ಸುಧಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.