ಎಪಿಎಂಸಿ ಹಮಾಲಿಗಳ ಪ್ರತಿಭಟನೆ

ದಾವಣಗೆರೆ. ಜ.೨; ದೆಹಲಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ಹಮಾಲಿ ಕಾರ್ಮಿಕ ಸಂಘಟನೆ ನೀಡಿರುವ ತುರ್ತು ಹೋರಾಟದ ಕರೆಯ ಮೇರೆಗೆ, ಎ.ಪಿ.ಎಂ.ಸಿ.ಯಲ್ಲಿರುವ ಶ್ರೀ ವಿಘ್ನೇಶ್ವರ ಲೋಡಿಂಗ್ ಮತ್ತು ಅನ್ ಲೋಡಿಂಗ್ ಹಮಾಲರ ಸಂಘವು ದಾವಣಗೆರೆಯ ಎ.ಪಿ.ಎಂ.ಸಿ. ಆವರಣದಲ್ಲಿ  ಕೇಂದ್ರ ಸರ್ಕಾರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳ ಪ್ರತಿಗಳನ್ನು ಹರಿದುಹಾಕುವ ಮೂಲಕ ಪ್ರತಿಭಟನೆ ಮಾಡಲಾಯಿತು, ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನು ರಕ್ಷಿಸುತ್ತೇವೆ, ಕರ‍್ಫೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ ಎಂಬ ಪ್ರತಿಜ್ಞೆ ಮಾಡಲಾಯಿತು. ಎಲ್ಲಾ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ಧುಗೊಳಿಸಬೇಕು.ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು.ವಿದ್ಯುತ್ ಮಸೂದೆ 2020 ನ್ನು ಹಿಂದಕ್ಕೆ ಪಡೆಯಬೇಕು.ಎಲ್ಲಾ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಆದಾಯ ತೆರಿಗೆಯ ಮಿತಿಯಿಂದ ಹೊರಗಿರುವ ಎಲ್ಲಾ ಕುಟುಂಬಗಳಿಗೂ ಮಾಸಿಕ ರೂ.7,500/- ನಗದು ಹಣ ವರ್ಗಾವಣೆ ಮಾಡಬೇಕು.ಬಡವರಿಗೆ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು 10 ಕೆ.ಜಿ. ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಬೇಕು.ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಾರ್ಷಿಕ 200 ದಿನಗಳ ಕೆಲಸ ಮತ್ತು ದಿನಕ್ಕೆ ರೂ 700/- ಕೂಲಿ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾ ಯೋಜನೆಗಳನ್ನು ವಿಸ್ತರಿಸಬೇಕು.ಉಚಿತ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಈ ವೇಳೆ ಹಮಾಲಿ ಕಾರ್ಮಿಕ ಸಂಘದ ನಾಯಕರಾದ ಹಾಲೇಶನಾಯ್ಕ, ಕುಮಾರನಾಯ್ಕ, ಬಸವರಾಜು ಹಾಗೂ ಸಿ.ಐ.ಟಿ.ಯು. ಸಂಘದ ಜಿಲ್ಲಾ ಸಂಚಾಲಕ ಆನಂದರಾಜು ಕೆ.ಹೆಚ್. ಮತ್ತು ಇತರರು ಭಾಗವಹಿಸಿದ್ದರು.