ಎಫ್‍ಪಿಎಐದಿಂದ ಚಿಮಕೋಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಬೀದರ,ಜೂ 7: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ( ಎಫ್‍ಪಿಎಐ ) ಜಿಲ್ಲಾ ಶಾಖೆಯವತಿಯಿಂದ ಚಿಮಕೋಡ್ ಗ್ರಾಮದಯಲ್ಲಾಲಿಂಗೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಅರಿವು-ಮಾಹಿತಿ ಕಾರ್ಯಕ್ರಮ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಂಸ್ಥೆಯ ಅಧ್ಯಕ್ಷ ಡಾ. ನಾಗೇಶ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪರಿಸರ ಸಂರಕ್ಷಣೆ ಮಾಡುವುದು ಹಾಗೂಪ್ಲಾಸ್ಟಿಕ್ ಬಳಕೆ ನಿಯಂತ್ರಿಸಿ, ಪ್ಲಾಸ್ಟಿಕ್ ಮುಕ್ತ ಸಮಾಜ ಮಾಡುವುದುನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಮಕ್ಕಳಿಗೆ ಹಾಗೂ ಯುವ ಪೀಳಿಗೆಗೆಪರಿಸರ ಸಂರಕ್ಷಣೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದಾಗ ಮಾತ್ರ ನಮ್ಮಮುಂದಿನ ಪೀಳಿಗೆ ಉತ್ತಮ ಆರೋಗ್ಯಕರವಾದ ವಾತಾವರಣವನ್ನುಅನುಭವಿಸಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮಾಡುವ ಪಣ ತೊಡಬೇಕು ಎಂದು ಕರೆ ನೀಡಿದರು. ಎಫ್‍ಪಿಎಐ ಸಂಸ್ಥೆಯ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ ಬಿರಾದಾರ ಪ್ರಾಸ್ತವಿಕವಾಗಿ ಮಾತನಾಡಿದರು.
ಚಿಮಕೋಡ್ ಗ್ರಾಪಂ ಅಭಿವೃದ್ಧಿ ಅಧಿಕಾರಿ ಗೀತಾ, ಗ್ರಾಪಂ ಅಧ್ಯಕ್ಷನಾಗಶೆಟ್ಟಿ ಬಿರಾದಾರ ಹಾಗೂ ಇನ್ನಿತರ ಸದಸ್ಯರು ವೇದಿಕೆಯ ಮೇಲಿದ್ದರು.ಯಲ್ಲಾಲಿಂಗೇಶ್ವರ ಪ್ರೌಢಶಾಲೆಯ ಮುಖ್ಯ ಗುರುಇಂದುಮತಿ ಸ್ವಾಗತಿಸಿದರು.
ದೈಹಿಕ ಶಿಕ್ಷಕರು ವಂದರ್ನಾಪಣೆ ಮಾಡಿದರು ಹಾಗೂಎಫ್‍ಪಿಎಐ ಕಾರ್ಯಕ್ರಮ ಅಧಿಕಾರಿ ನಿರೂಪಿಸಿದರು.ಕಾರ್ಯಕ್ರಮದ ನಂತರ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಿಗೆ ಸಸಿಗಳ ಸಂರಕ್ಷಣೆಯ ಜವಬ್ದಾರಿ ವಹಿಸಲಾಯಿತು.