ಎಬಿಆರ್‍ಕೆ ಕಾರ್ಡುಗಳ ವಿತರಣೆ ಪ್ರಕ್ರಿಯೆ ವೇಗಗೊಳಿಸಿ: ಸಚಿವ ಉಮೇಶ ಕತ್ತಿ

ವಿಜಯಪುರ, ಜು.26-ಎಬಿಆರ್‍ಕೆ ಕಾರ್ಡುಗಳ ವಿತರಣೆ ಪ್ರಕ್ರಿಯೆಯನ್ನು ವೇಗಗೊಳಿಸಿ, ಬರುವ ಕೆಡಿಪಿ ಸಭೆಯ ವೇಳೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಡುಗಳ ವಿತರಣೆಗೆ ಕ್ರಮ ವಹಿಸಬೇಕು ಎಂದು ಅರಣ್ಯ ಮತ್ತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ವಿ ಕತ್ತಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಅಧಿಕಾರಿಗಳು ಸಭೆಗೆ ಸರಿಯಾದ ಮಾಹಿತಿ ಕೊಡಬೇಕು. ತಪ್ಪು ಮಾಹಿತಿ ಒದಗಿಸಿ ಅನಗತ್ಯ ಗೊಂದಲ ಸೃಷ್ಟಸಿದರೇ ಅಂತವರ ಮೇಲೆ ಅಮಾನತು ಕ್ರಮಕ್ಕೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಹಳ್ಳಿಗಳಲ್ಲಿ ಸಾರಾಯಿ ಮಾರಾಟ ಅವ್ಯಾಹತ ನಡೆಯುತ್ತಿದೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಹಳ್ಳಿಗಳಲ್ಲಿ ಸಾರಾಯಿ ಮಾರಾಟ ಬಂದ್ ಆಗದಿದ್ದರೆ ಸಂಬಂಧಿಸಿದ ಇಲಾಖಾಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕರ ಅನುದಾನದಲ್ಲಿ ನೀಡಿದ ಅಂಬ್ಯುಲೆನ್ಸಗಳಿಗೆ ವಾಹನ ಚಾಲಕರು ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ ಅವರು ಸಭೆಗೆ ತಿಳಿಸಿದರು. ಜಿಲ್ಲೆಯಲ್ಲಿರುವ 19 ಅಂಬ್ಯುಲೆನ್ಸಗಳ ಪೈಕಿ ಕೆಲವು ಕಡೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ಪಡೆದುಕೊಂಡಿದ್ದೇವೆ. ಅನುಮತಿ ನೀಡಿದರೆ ಅಗತ್ಯಕ್ಕೆ ತಕ್ಕಂತೆ ಡ್ರೈವರಗಳ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ಡಿಎಚ್‍ಓ ಅವರು ತಿಳಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಸಲಹೆ ಮಾಡಿದರು.
ಈಗಾಗಲೇ ತಯಾರಿಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರೋಮಾ ಸೆಂಟರಗಳಿಗೆ ವೈದ್ಯರು, ನರ್ಸಗಳು ಸೇರಿದಂತೆ ಸಿಬ್ಬಂದಿ ಇಲ್ಲ. ತಾಲೂಕಾಸ್ಪತ್ರೆಗಲ್ಲಿ ಸ್ತ್ರೀರೋಗ ತಜ್ಞ ವೈದ್ಯರಿಲ್ಲ ಎಂದು ಶಾಸಕರಾದ ಶಿವಾನಂದ ಪಾಟೀಲ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಣ್ಣಪುಟ್ಟ ದುರಸ್ತಿಗೂ 108 ಮತ್ತು ಅಂಬ್ಯುಲೆನ್ಸಗಳನ್ನು ವಿಜಯಪುರ ಸಿಟಿ ಬಿಟ್ಟು ಬೇರೆಡೆ ಕಳುಹಿಸಲಾಗುತ್ತಿದೆ. ಇದರಿಂದ ಹಣವು ಅನವಶ್ಯಕ ಪೆÇೀಲಾಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದು ಶಾಸಕರಾದ ದೇವಾನಂದ ಫೂ.ಚವ್ಹಾಣ್ ಅವರು ಸಲಹೆ ಮಾಡಿದರು.
ವಿದ್ಯುತ್ ಕಡಿತಕ್ಕೆ ಅಸಮಾಧಾನ: ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯದ ಹೆಸರು ಉತ್ತಮವಾಗಿದೆ. ವಿತರಣೆಯಲ್ಲಿ ಲೋಪವೇಕೆ ಎಂದು ಸಭೆಯಲ್ಲಿ ವಿವಿಧ ಕ್ಷೇತ್ರಗಳ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ನಿರಂತರ ಜ್ಯೋತಿ ಯೋಜನೆಯಡಿ ಜಿಲ್ಲೆಗೆ ಸಮರ್ಪಕ ರೀತಿಯಲ್ಲಿ ವಿದ್ಯುತ್ ಪೂರೈಕೆ ಆಗಬೇಕು. ವಿದ್ಯುತ್ ಕಡಿತವಾಗುವುದು ನಿಲ್ಲಬೇಕು. ಬೆಳೆ ವಿಮಾ ಬಗ್ಗೆ ಹೋಬಳಿವಾರು ರೈತರಿಗೆ ತರಬೇತಿ ನೀಡಬೇಕು ಎಂದು ಶಾಸಕರಾದ ಸೋಮನಗೌಡ ಬಿ ಪಾಟೀಲ ಸಾಸನೂರ ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಎನ್ಟಿಪಿಸಿ ಇದ್ದು, ವಿದ್ಯುತ್ ಉತ್ಪಾದನೆ ಸಮರ್ಪಕವಾಗಿದ್ದರೂ ಜಿಲ್ಲೆಯ ಜನರು ಸಮರ್ಪಕ ವಿದ್ಯುತ್ ಸಿಗುತ್ತಿಲ್ಲ ಎಂದು ಗೋಳಾಡುವಂತಾಗಬಾರದು ಎಂದು ಶಾಸಕರಾದ ಯತ್ನಾಳ ಅವರು ಸಲಹೆ ಮಾಡಿದರು.
ಜಿಲ್ಲಾಸ್ಪತ್ರೆಯಲ್ಲಿ ಒತ್ತಡವನ್ನು ತಪ್ಪಿಸಲು ತಾಲೂಕು ಆಸ್ಪತ್ರೆಗಳಿಗೆ ಪಾಳಿ ಪ್ರಕಾರ ತಜ್ಞ ವೈದ್ಯರನ್ನು ನಿಯೋಜಿಸಿ ಸಮರ್ಪಕ ಕಾರ್ಯನಿರ್ವಹಣೆಗೆ ಒತ್ತು ಕೊಡಲಾಗುತ್ತಿದೆ ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು.
ರಸ್ತೆ ದುರಸ್ತಿಗೊಳಿಸಿ: ಇಂಡಿ ಕ್ಷೇತ್ರದಲ್ಲಿ 34 ಹಳ್ಳಿಗಳಿಗೆ ಕುಡಿಯಲು ನೀರಿಲ್ಲದಂತಹ ಸ್ಥಿತಿ ಇದೆ. ಹೀಗಿದ್ದಾಗ್ಯೂ ಬ್ಯಾರೇಜಗಳಲ್ಲಿ ನೀರು ಸಂಗ್ರಹಣೆ ಕಾರ್ಯ ಆಗುತ್ತಿಲ್ಲ. ಸರ್ಕಾರದಿಂದ ಅನುದಾನ ಪಡೆದುಕೊಂಡು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ ಕಾರ್ಯ ಮಾಡಬೇಕು. ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಗಮನ ಕೊಡಬೇಕು. ನಗರದ ಕೆಲವು ಕಾಲೇಜಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ತಡೆಯಬೇಕು ಎಂದು ಶಾಸಕರಾದ ಯಶವಂತರಾಯಗೌಡ ಪಾಟೀಲ ಸಭೆಗೆ ಸಲಹೆ ಮಾಡಿದರು. ಯುವ ಪೀಳಿಗೆಯನ್ನು ತಪ್ಪು ದಾರಿಗೆ ಒಯ್ಯುವ ಡ್ರಗ್ ಹಾವಳಿ ತಡೆಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಸಂಬಂಧಿಸಿದ ಇಲಾಖೆ ಈ ಕೂಡಲೇ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಸಭೆಯಲಿ ಶಾಸಕರಾದ ಶಾಸಕರಾದ ರಮೇಶ ಭೂಸನೂರ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ವಿಜುಗೌಡ ಪಾಟೀಲ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಡಾ.ಹೆಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ, ರಾಮಚಂದ್ರ ಗಡಾದೆ ಹಾಗೂ ಇತರರು ಇದ್ದರು.