ಎಬಿವಿಪಿಯಿಂದ ಸಿಇಟಿ, ನೀಟ್ ಗೆ ಉಚಿತ ತರಬೇತಿ ವಿದ್ಯಾರ್ಥಿ ಪರಿಷತ್ ಕಾರ್ಯ ಶ್ಲಾಘನೀಯ : ಸದಾಶಿವ ಬಡಿಗೇರ್

ಬೀದರ್ : ಮಾ.19:ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರಪ್ರೇಮ, ಮತ್ತು ಸಮಾಜಸೇವಾ ಮನೋಭಾವ ಬೆಳೆಸುವ ಸ್ವಯಂ ಸೇವಕರ ದಿಟ್ಟ ನಿಲುವು ನೋಡಿ ಸಂತಸವಾಗುತ್ತದೆ, ಎಬಿವಿಪಿಯಂತ ಸ್ವಯಂ ಸೇವಕರ ಕೆಲಸ ದೊಡ್ಡದು, ರೈತ ಸೈನಿಕ ಮತ್ತು ವಿದ್ಯಾರ್ಥಿಗಳು ದೇಶದ ಶಕ್ತಿ ನಮ್ಮ ದೇಶಕ್ಕೆ ಇಂದು ಇಂತಹ ಸಂಘಟನೆಗಳ ಅಗತ್ಯವಿದೆ ಎಂದು ಸದಾಶಿವ ಬಡಿಗೇರ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಹೇಳಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಆಯೋಜಿಸಿದ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ಶಿಬಿರದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಬಿವಿಪಿ ವಿದ್ಯಾರ್ಥಿಗಳ ಧ್ವನಿಯಾಗಿ ಸೇವೆ ಸಲ್ಲಿಸುತ್ತಿದೆ. ಎಬಿವಿಪಿ ಕಾರ್ಯ ಮೆಚ್ಚುವಂತದಾಗಿದೆ ಎಂದರು ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೀದರ ಜಿಲ್ಲಾ ಘಟಕದ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದೆ. ಮಾರ್ಚ್ 6 ರಿಂದ ಪ್ರವೇಶ ಪ್ರಾರಂಭವಾಗಿದ್ದು, ಮಾರ್ಚ್ 26 ರಂದು ಸಿಇಟಿ, ನೀಟ್ ತರಬೇತಿಗಳು ನಡೆಯಲಿವೆ. ಇದಕ್ಕಾಗಿ ಯಾವುದೇ ರೀತಿ ಶುಲ್ಕವಿರುವುದಿಲ್ಲ. ಎಲ್ಲ ವಿಷಯಗಳ ನೋಟ್ಸ್ ಮುದ್ರಣಕ್ಕಾಗಿ 1 ಸಾವಿರ ರೂ ವಿದ್ಯಾರ್ಥಿಗಳು ನೀಡಬೇಕಿದೆ ಎಂದರು.
ಔರಾದ್ (ಬಿ) ತಾಲೂಕು ಕಲ್ಯಾಣಾಧಿಕಾರಿಗಳಾದ ರವೀಂದ್ರ ಸಿಇಟಿ, ನೀಟ್ ಗಾಗಿ ಲಕ್ಷಾಂತರ ರೂಪಾಯಿ ಶುಲ್ಕವನ್ನು ಭರಿಸಬೇಕಿದೆ. ಇದರ ಬಗ್ಗೆ ಬಡವರಿಗೆ ಅನುಕೂಲಕ್ಕಾಗಿ ಉಚಿತ ಶಿಬಿರ ಹಮ್ಮಿಕೊಂಡಿರುವುದು ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಎಬಿವಿಪಿ ಸ0ಘಟನ ಕಾರ್ಯದರ್ಶಿ ಹೇಮಂತ ಮಾತನಾಡಿ, ಬೀದರ ನಗರದ ಸನ್ ಸಾಫ್ಟ್ ಪದವಿ ಕಾಲೇಜಿನಲ್ಲಿ ಒಂದು ತಿಂಗಳು ಉಚಿತ ತರಬೇತಿ ನಡೆಯುತ್ತಿದೆ. ಕಳೆದ 10 ವರ್ಷಗಳಿಂದ ತರಬೇತಿ ನಡೆಸಲಗುತ್ತಿದ್ದು, ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ಕಳೆದ ವರ್ಷ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ಇಲ್ಲಿಯವರೇ ನೂರಾರು ಜನ ತರಬೇತಿಯಿಂದ ಸಿಇಟಿ, ನೀಟ್ ಸೀಟುಗಳು ಪಡೆದಿದ್ದಾರೆ ಎಂದರು.
ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೇ ಮಾತನಾಡಿ ಹೆಚ್ಚಿನ ಮಾಹಿತಿಗಾಗಿ 7624906563, 7411312269, 741134149 ಸಂಪರ್ಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಶೋಕ ಜಿಲ್ಲಾ ಕಲ್ಯಾಣಾಧಿಕಾರಿಗಳು, ಹಿರೇಗೌಡರು ಬಸವಕಲ್ಯಾಣ ತಾಲೂಕು ಕಲ್ಯಾಣಾಧಿಕಾರಿಗಳು, ಪವನ್ ಕುಂಬಾರ್, ಆನಂದ್ ,ಸಾಯಿ ಕಿರಣ್ ,ರಾಜಕುಮಾರ್, ಬಸವರಾಜ,ಕಾರ್ಯಕರ್ತರು ಉಪಸ್ಥಿತರಿದ್ದರು.