ನವದೆಹಲಿ,ನ.27- ದಕ್ಷಿಣ ಆಫ್ರಿಕಾದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಸೋಂಕು ಎಮಿಕ್ರಾನ್ ಆಂತಕದ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ತನಕ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.
ದೇಶದಲ್ಲಿ ಲಸಿಕೆ ನೀಡಿದ ಪ್ರಮಾಣ ಸೇರಿದಂತೆ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಪ್ರಧಾನಿ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ಸೋಂಕು ಕಾಣಿಸಿಕೊಂಡ ಪ್ರದೇಶಗಳಲ್ಲಿ ಕ್ಲಸ್ಟರ್ ನಿರ್ಮಾಣ ಮಾಡಬೇಕು, ಜನರ ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು. ರಾಜ್ಯಗಳಿಗೆ ಆಗತ್ಯವಿದ್ದರೆ ತಾಂತ್ರಿಕ ಸಲಹೆ ಸೂಚನೆಯನ್ನು ನೀಡುವಂತೆ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಂತರಾಷ್ಟ್ರೀಯ ನಿರ್ಬಂಧ :
ಇತ್ತೀಚೆಗೆ ಪತ್ತೆಯಾಗಿರುವ. ಹೊಸ ರೂಪಾಂತರ ಓಮಿಕ್ರಾನ್ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಪ್ರಯಾಣದ ಮೇಲಿನ ನಿರ್ಬಂಧಗಳನ್ನು ಸರಾಗಗೊಳಿಸುವ ಯೋಜನೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
“ಹೊಸ ಸೋಂಕಿನ ಬೆದರಿಕೆಯಿಂದ ಜನರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಮುಖಗವಸು ಧರಿಸಬೇಕು, ಸಾಮಾಜಿಕ ಅಂತರ ಕಾಪಾಡುವುಡು ಸೇರಿದಂತೆ ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಸೋಂಕಿನ ಅಪಾಯದಲ್ಲಿರುವ’ ದೇಶಗಳನ್ನು ಗುರುತಿಸಿ ಅವುಗಳ ಮೇಲೆ ನಿರ್ದಿಷ್ಟ ಗಮನ ಕೇಂದ್ರೀಕರಿಸಬೇಕು ಎಲ್ಲಾ ಅಂತರಾಷ್ಟ್ರೀಯ ಆಗಮನದ ಮೇಲ್ವಿಚಾರಣೆ, ಮಾರ್ಗಸೂಚಿಗಳ ಪ್ರಕಾರ ಅವರ ಕೊರೊನಾ ಸೋಂಕು ಪರೀಕ್ಷೆ ನಡೆಸಬೇಕು ಎಂದು ಅವರು ತಿಳಿಸಿದರು..
ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಹೊಸ ಕರೋನಾ ರೂಪಾಂತರವಾದ ಓಮಿಕ್ರಾನ್ ಜಗತ್ತಿನ ವಿವಿಧ ದೇಶಗಳಲ್ಲಿ ಕಾಣಿಸಿಕೊಂಡಿದೆ.ರೂಪಾಂತರವಾದ ಓಮಿಕ್ರಾನ್ ಮೇಲಿನ ಚಿಂತೆಗಳ ನಡುವೆ ಸಭೆ ನಡೆಸಲಾಗಿದೆ.ಇದು ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ರೂಪಾಂತರಗಳನ್ನು ಹೊಂದಿದೆ ಎಂದು ತಜ್ಞರು ಹೇಳಿದ್ದಾರೆ.
ದಕ್ಷಿಣ ಆಪ್ರಿಕಾ, ಬೋಟ್ಸ್ವಾನಾ, ಹಾಂಗ್ ಕಾಂಗ್, ಇಸ್ರೇಲ್ ಮತ್ತು ಬೆಲ್ಜಿಯಂನಿಂದ ರೂಪಾಂತರ ಕಾಣಿಸಿಕೊಂಡಿದ್ದು ಹೊಸ ರೂಪಾಂತರದ ಆವಿಷ್ಕಾರದ ನಂತರ ದಕ್ಷಿಣ ಆಫ್ರಿಕಾದ ದೇಶಗಳ ಪ್ರಯಾಣದ ಮೇಲೆ ಅಮೇತಿಕಾ , ಹಾಂಗ್ ಕಾಂಗ್‌ಗೆ ಸರ್ಕಾರಗಳು ನಿರ್ಬಂಧಗಳನ್ನು ಬಿಗಿಗೊಳಿಸಲು ಸೂಚಿಸಿದ್ದಾರೆ.
ಭಾರತ ಹಲವಾರು ದೇಶಗಳನ್ನು ಪಟ್ಟಿಗೆ ಸೇರಿಸಿದೆ, ಅಲ್ಲಿ ಪ್ರಯಾಣಿಕರು ಆಗಮನದ ನಂತರ ಸೋಂಕಿನ ನಂತರದ ಪರೀಕ್ಷೆ ಸೇರಿದಂತೆ ಹೆಚ್ಚುವರಿ ಕ್ರಮಗಳನ್ನು ಅನುಸರಿಸಲು ಸೂಚಿಸಿದ್ದಾರೆ.
“ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರಿಯಾದ ಜಾಗೃತಿ ಇದೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಹೆಚ್ಚಿನ ಪ್ರಕರಣಗಳನ್ನು ವರದಿಯಾಗುವ ಪ್ರದೇಶಗಳಬ್ಬು ಕ್ಲಸ್ಟರ್‌ಗಳಲ್ಲಿ ತೀವ್ರವಾದ ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲು ಮುಂದುವರಿಸಬೇಕು ಎಂದು ಹೇಳಿದ್ದಾರೆ.
ಸಭೆಯಲ್ಲಿ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ, ನೀತಿ ಆಯೋಗದ ಸದಸ್ಯ ವಿಕೆ ಪಾಲ್, ಗೃಹ ಕಾರ್ಯದರ್ಶಿ ಎಕೆ ಭಲ್ಲಾ, ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು