ಎರಡನೇ ಏಕದಿನ ಪಂದ್ಯಕ್ಕೂ ಕೊಹ್ಲಿ ಅಲಭ್ಯ

ಲಂಡನ್, ಜು.13- ನಾಳೆಯಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುವುದಿಲ್ಲ.
ಮೂರನೇ ಟಿ.20 ಪಂದ್ಯದ ವೇಳೆ ಕೊಹ್ಲಿ ಗಾಯಗೊಂಡಿದ್ದರು. ಇನ್ನೂ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ನಾಳಿನ ಪಂದ್ಯದಿಂದಲೂ ದೂರ ಉಳಿಯಲಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ.‌ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿತ್ತು.
ಕೊಹ್ಲಿ ಭಾರತ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದಾರೆ. ಬ್ಯಾಟಿಂಗ್ ಲಯಕ್ಕೆ ಮರಳಲು ಹೆಣಗಾಡುತ್ತಿದ್ದಾರೆ. ಈ ಸರಣಿಯಲ್ಲಿ‌‌ ಕೊಹ್ಲಿ ಫಾರ್ಮ್ ಗೆ ಮರಳಬೇಕಾಗಿದೆ. ಆದರೆ ಗಾಯಾಳುವಾಗಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ
ಕೊಹ್ಕಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಟಿ-20 ಸರಣಿಯ ಐದು ಪಂದ್ಯಗಳಿಗೆ ತಂಡವನ್ನು ಇನ್ನೂ ಆಯ್ಕೆ ಮಾಡಲಾಗಿಲ್ಲ.
ನಿನ್ಬೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತ್ತು