ಎರಡನೇ ಹಂತದ ದ್ವೀತಿಯ ಪಿ.ಯು.ಸಿಪರೀಕ್ಷೆಯಲ್ಲಿ ಯಾವುದೇ ರೀತಿ ಲೋಪವಾಗದಂತೆ ನೋಡಿಕೊಳ್ಳಿ

oplus_2

ಬೀದರ. ಏ.26: ಜಿಲ್ಲೆಯಲ್ಲಿ ಏಪ್ರೀಲ್ 29 ರಿಂದ ಮೇ 16ರ ವರೆಗೆ ನಡೆಯುವ ಎರಡನೇ ಹಂತದ ದ್ವೀತಿಯ ಪಿ.ಯು.ಸಿ ಪರೀಕ್ಷೆಗಳು ಯಾವುದೇ ತರಹದ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿವಾರ್ಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ ಶಹಾಬಾದಕರ್ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಎರಡನೇ ಹಂತದ ದ್ವೀತಿಯ ಪಿ.ಯು.ಸಿ ಪರೀಕ್ಷೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಮಾಹಿತಿ ನೀಡುತ್ತಾ ಜಿಲ್ಲೆಯಲ್ಲಿ 184 ಕಾಲೇಜುಗಳ ವಿಧ್ಯಾರ್ಥಿಗಳು 11 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4,584 ವಿಧ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರರ್ದಾಶಕವಾಗಿ ಪರೀಕ್ಷೆಯನ್ನು ನಡೆಸಲು ಸಿ.ಸಿ.ಟಿವಿ ವೆಬ್‍ಕಾಸ್ಟಿಂಗ್ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿ ನಕಲು ನಡೆಯದಂತೆ ನೋಡಿಕೊಳ್ಳಬೇಕು. ಎಲ್ಲಾ ತಾಲೂಕಿನ ರೋಟ್ ಅಧಿಕಾರಿಗಳು ನಿಗಧಿಪಡಿಸಿದ ಸಮಯಕ್ಕೆ ಸರಿಯಾಗಿ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಎಲ್ಲಾ ತಾಲೂಕಿನ ತಹಸೀಲ್ದಾರರು, ಕ್ಷೇತ್ರ ಶಿಕ್ಷಾಧಿಕಾರಿಗಳು ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.