ಎರಡನೇ ಹಂತದ ರ‌್ಯಾಂಡಮೈಸೇಷನ್ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ

ಕಲಬುರಗಿ:ಏ.24:ಗುಲಬರ್ಗಾ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ದೀಪನ್‍ಕರ್ ಸಿನ್ಹಾ ಅಧ್ಯಕ್ಷತೆಯಲ್ಲಿ ಎರಡನೇ ಹಂತದ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್ ರ‌್ಯಾಂಡಮೈಸೇಷನ್ ಸಂಬಂಧ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರ, ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಯಿತು.

ಮುಮಬರುವ ಲೋಕಸಭಾ ಚುನಾವಣೆ ಸಂಬಂಧ ಎರಡನೇ ಹಂತದ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಯಿತು.

ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷಗಳ‌ ಮುಖಂಡರು ಭಾಗವಹಿಸಿದ್ದರು.