ಎರಡು ಆಂಬುಲೆನ್ಸ್‍ಗಳಿಗೆ ಚಾಲನೆ

ಕಲಬುರಗಿ,ಮಾ.6-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ಅಂಬಲಗಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನರೋಣಾ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅನುಕೂಲವಾಗಲೆಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾe ಮತ್ತಿಮೂಡ ಅವರು ಎರಡು ಆಂಬುಲೆನ್ಸ್‍ಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಈ ಆಂಬುಲೆನ್ಸ್‍ಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದ ಅಡಿಯಲ್ಲಿ ಈ ಎರಡು ಆಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಲಾಗಿದೆ. ಆಂಬುಲೆನ್ಸ್‍ಗಳಿಂದ ಅಂಬಲಗಾ ಹಾಗೂ ನರೋಣ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರಿಗೆ ತುರ್ತು ಆರೋಗ್ಯ ಸೇವೆ ಲಭ್ಯವಾಗಿಲಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ್ ಸ್ವಾಮಿ, ಆಳಂದ ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಶೀಲ್ ಕುಮಾರ, ಅಂಬಲಗಾ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಲಾಉದ್ದೀನ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.