
ಶಿವಮೊಗ್ಗ, ಏ. 1: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ವಾಹನವೊಂದರಲ್ಲಿ 20 ಲಕ್ಷ ರೂ. ಪತ್ತೆಯಾಗಿದೆ. ಶನಿವಾರ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಈ ಚೆಕ್ ಪೋಸ್ಟ್ ಗಳು ದಿನದ 24 ಗಂಟೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ.