ಎರಡು ಬೈಕ್ ಗಳ ಮಧ್ಯೆ ಡಿಕ್ಕಿ: ಓರ್ವನ ಸಾವು

ಕಲಬುರಗಿ,ಜ.4-ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಹಡಗಿಲ್ ಹಾರುತಿ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತನನ್ನು ಮೇಳಕುಂದಾ (ಕೆ) ಗ್ರಾಮದ ಸೋಮಣ್ಣಾ ಭೀಮಶಾ (53) ಎಂದು ಗುರುತಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆ-1ರ ಪಿಐ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
@12bc = ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಮುಳ್ಳುಕಂಟಿ
ಮೇಳಕುಂದಾ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ, ರಸ್ತೆಯ ಎರಡೂ ಬದಿಗೆ ಬೆಳೆದು ನಿಂತಿರುವ ಮುಳ್ಳುಕಂಟಿಯಿಂದಾಗಿ ಅಪಘಾತಗಳು ಸಂಭವಿಸಿ ಜನ ಜೀವ ಕಳೆದುಕೊಳ್ಳುತ್ತಿದ್ದು, ಸಂಬಂಧಪಟ್ಟವರು ಹಾಗೂ ಗ್ರಾಮ ಪಂಚಾಯತಿಯವರು ಮುಳ್ಳುಕಂಟಿಗಳನ್ನು ಕಡಿದು ಅಪಘಾತಗಳು ಸಂಭವಿಸುತ್ತಿರುವುದನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಕ್ಕೆ ಸಂಚರಿಸುವ ರಸ್ತೆಯ ಎರಡೂ ಬದಿಗೆ ಮುಳ್ಳುಕಂಟಿ ಬೆಳೆದು ನಿಂತಿರುವುದರಿಂದ ಎದುರಿನಿಂದ ವಾಹನ ಬರುವುದು ಗಮನಕ್ಕೆ ಬರುವುದಿಲ್ಲ ಹೀಗಾಗಿ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಮುಳ್ಳುಕಂಟಿ ಕಡಿಸಿ ಅಪಘಾತ ಸಂಭವಿಸುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.