ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ವಿಜಯಪುರ, ಫೆ.22:ಎರಡು ಬೈಕ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ನಡೆದಿದೆ.
ಅಮೀನಸಾಬ್ ಶೇಖ್ ಸೇರಿದಂತೆ ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಅಪಘಾತದಲ್ಲಿ ಎರಡು ಬೈಕ್‍ಗಳು ಜಖಂಗೊಂಡಿವೆ. ವಿಜಯಪುರ ಸಂಚಾರಿ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.