ಎರಡು ಲಕ್ಷ ಹಳ್ಳಿಗಳ ಸ್ವಚ್ಛತೆಗೆ ಆದ್ಯತೆ

ನವದೆಹಲಿ, ಅ.೨- ದೇಶಾದ್ಯಂತವಿರುವ ೪೦,೦೦೦ ಗ್ರಾಮ ಪಂಚಾಯತಿಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜೊತೆಗೆ ಎರಡು ಲಕ್ಷ ಹಳ್ಳಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಆರಂಭಿಸಿವೆ. ಇದರಿಂದಾಗಿ ಹಳ್ಳಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿದಂತಾಗಲಿದೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಜಲಜೀವನ ಕೋಶ ಮತ್ತು ಜಲಜೀವನ ಮಿಷನ್ ಮೊಬೈಲ್ ಅಪ್ಲಿಕೇಶನ್ ಗೆ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದಿಂದಾಗಿ ಪರಿಸರ ಮಾಲಿನ್ಯ ವಾಗುವುದು ತಪ್ಪಲಿದೆ ಎಂದು ಅವರು ತಿಳಿಸಿದ್ದಾರೆ

ಜಲ ಜೀವನ ಮಿಷನ್ ಹಳ್ಳಿಗಳಲ್ಲಿ ಮತ್ತು ಮಹಿಳೆಯರಲ್ಲಿ ಜನಾಂದೋಲನ ವಾಗಿದೆ. ಇನ್ನು ಮುಂದೆ ಎಲ್ಲಾ ಚಳವಳಿಗಳು ಒಂದೇ ಆಪ್ ನಲ್ಲಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ ಲಕ್ಷಾಂತರ ಹಳ್ಳಿಗಳಲ್ಲಿ ಜನರು ಜಲಜೀವನ ಸಂವಾದ ನಡೆಸುವ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜೊತೆಗೆ ಅಧಿಕಾರ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಜನರ ಮತ್ತು ಗ್ರಾಮಗಳ ಸಹಭಾಗಿತ್ವದಲ್ಲಿ ಜಲ ಜೀವನ ಅಭಿಯಾನ ಜನಾಂದೋಲನವಾಗಿ ರೂಪಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ

ಆತ್ಮ ನಿರ್ಭರ ಅಭಿಯಾನ ಭಾರತ ಯೋಜನೆಯಡಿ ದೇಶದಲ್ಲಿ ಖಾದಿ ಮತ್ತು ಕರಕುಶಲ ವಸ್ತುಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಆತ್ಮ ನಿರ್ಭರ ಭಾರತ ಯೋಜನೆಯಡಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಭಾರತ ಮಂಚೂಣಿಯಲ್ಲಿ ಇಟ್ಟಿದೆ ಎಂದು ಅವರು ತಿಳಿಸಿದ್ದಾರೆ.