ಎರವಲು ಸೇವೆ ಸಿಬ್ಬಂದಿ ಮಾತೃ ಇಲಾಖೆಗೆ ಹಿಂಪಡೆಯಲು ಕ್ರಮ :ಸಚಿವ ಪ್ರಭು ಚವ್ಹಾಣ್

ಬೆಂಗಳೂರು,ಮಾ.25- ಪಶುಸಂಗೋಪನೆ ಇಲಾಖೆಯಿಂದ ಎರವಲು ಸೇವೆ ಮೇಲೆ ತರಳಿರುವ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಹಿಂಪಡೆಯಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಇಲಾಖೆಯ ಅಧಿಕಾರವಹಿಸಿಕೊಂಡ ನಂತರದಲ್ಲಿ ಪಶುಸಂಗೋಪನೆ ಇಲಾಖೆಯಿಂದ ಎರವಲು ಸೇವೆ ಮೇಲೆ ತೆರಳಿರುವ ಬಹುತೇಕ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಹಿಂಪಡೆಯಲಾಗಿದೆ. ಇಲಾಖೆಯ ಉಪನಿರ್ದೇಶಕರುಗಳ ಸಭೆ ಕರೆದು ಎಲ್ಲ ಅಗತ್ಯ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಪಶುಸಂಗೋಪನೆ ಇಲಾಖೆಯಿಂದ ಎರವಲು ಸೇವೆ ಮೇಲೆ ತೆರಳಿರುವ ಸಿಬ್ಬಂಧಿಯನ್ನು ಮಾತೃ ಇಲಾಖೆಗೆ ಕರೆಸಿಕೊಳ್ಳಿ ಎಂದು ಪತ್ರ ಬರೆದಿದ್ದರು ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಸಿಬ್ಬಂದಿ ಕೊರತೆ ಹಿನ್ನೆಲೆ ಕ್ರಮ:

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾದ ನಂತರ ಇಲಾಖೆಯ ಜವಾಬ್ದಾರಿ ಹೆಚ್ಚಾಗಿದ್ದು ಸಿಬ್ಬಂದಿ ಕೊರತೆಯಿಂದ ಜಾನುವಾರುಗಳ ಆರೈಕೆಯಲ್ಲಿ ತೊಂದರೆ ಆಗಬಾರದು ಎಂದು ವಿಧಾನ ಪರಿಷತ್ ಸಭಾಪತಿ ಸಲಹೆ ನೀಡಿದ್ದರು ಹಾಗಾಗಿ ಈ ಕ್ರಮ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿದ್ದರಿಂದ ಪಶುಗಳ ಆರೈಕೆಗೆ ಹೆಚ್ಚಿನ ಸಿಬ್ಬಂದಿಗಳ ಆವಶ್ಯಕೆತೆಯಿದ್ದು ಈ ಮೊದಲಿನಿಂದಲು ಇಲಾಖೆಯಲ್ಲಿ ಪಶುವೈದ್ಯರ ಕೊರತೆಯಿದೆ ಇಂತಹ ಸಮಯದಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಎರವಲು ಸೇವೆ ಮೇಲೆ ಬೇರೆ ಇಲಾಖೆಗೆ ತೆರಳಿದರೆ ಪರಿಸ್ಥಿತಿ ನಿಭಾಯಿಸುವುದು ಕಷ್ಟಸಾಧ್ಯವಾಗುತ್ತದೆ ಎಂದಿದ್ದಾರೆ.