ಎಲ್ಲರು ತಪ್ಪದೆ ಮತದಾನ ಮಾಡಿ: ಸಿ.ಇ.ಓ

ಬೀದರ್: ಏ.20:ಸದೃಢ ಭಾರತ ನಿರ್ಮಾಣಕ್ಕಾಗಿ ಮೇ 7 ರಂದು ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ವತಿಯಿಂದ ಬೀದರ ಕೋಟೆಯಿಂದ ನೆಹರು ಕ್ರೀಡಾಂಗಣದ ವರೆಗೆ ಆಯೋಜಿಸಿದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಯಾರು ಮತದಾನದಿಂದ ತಪ್ಪಿಸಿಕೊಳ್ಳಬೇಡಿ, ಮತದಾನ ನಮ್ಮ ಭೌವ್ಯ ಭಾರತ ನಿರ್ಮಾಣಕ್ಕೆ ಬುನಾದಿ ಇದ್ದಂತೆ ಆದ್ದರಿಂದ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿಶ್ಥಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸ್ವೀಪ್ ಅಧಿಕಾರಿ ಡಾ.ಗೌತಮ್ ಅರಳಿ, ವಿಕಲಚೇತನರ ಕಲ್ಯಾಣ ಅಧಿಕಾರಿ ನಾಗರಾಜ್ ಮಠ್ ರಾಜಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು