
ಬೀದರ್:ಮೇ.1: ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ರವಿವಾರ ಜಿಲ್ಲಾಡಳಿತ. ಜಿಲ್ಲಾ ಸ್ವೀಫ್ ಸಮಿತಿ ಬೀದರ ವತಿಯಿಂದ ನಮ್ಮ ನಡೆ ಮತಗಟ್ಟೆ ಕಡೆ ಅಭಿಯಾನದ ಅಂಗವಾಗಿ ಬೀದರ ಕೋಟೆಯ ಮುಖ್ಯ ದ್ವಾರದಿಂದ ಚೌಬಾರದವರೆಗೆ ಹಮ್ಮಿಕೊಂಡಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಾರಂಪರಿಕ ನಡಿಗೆ ಕಾರ್ಯಕ್ರಮವನ್ನು ಜಿಲ್ಲಾ ಸ್ವೀಫ್ ಸಮಿತಿ ವತಿಯಿಂದ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವದೆ ಈ ಕಾರ್ಯಕ್ರಮದ ಉದ್ದೇಶವಾಗಿದೆ ಈ ಕಾರ್ಯಕ್ರಮ ಮೇ. 5 ರಂದು ಮತ್ತೆ ನಡೆಯಲಿದ್ದು ಆಗಲು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಸೇರಬೇಕೆಂದರು.
ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ಎಲ್ಲಾ ಕಡೆ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಇಂದು ಎಲ್ಲಾ ಮತಗಟ್ಟೆಗಳಲ್ಲಿ ಮತದಾನದ ಧ್ವಜಗಳನ್ನು ನೆರವೇರಿಸಲಾಗುತ್ತಿದೆ ಜಿಲ್ಲೆಯ ಎಲ್ಲಾ ಜನರು ತಪ್ಪದೆ ಮೇ 10 ರಂದು ಮತದಾನ ಮಾಡಬೇಕೆಂದು ಹೇಳಿದರು.
ಜಿಲ್ಲಾ ಸ್ವೀಫ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಎಂ. ಅವರು ಮಾತನಾಡಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲಾ ಜನರು ಸಕ್ರಿಯವಾಗಿ ಭಾಗವಹಿಸಬೇಕೆಂದು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ ನಮ್ಮ ನಡೆ ಮತಗಟ್ಟೆ ಕಡೆ ಈ ಕಾರ್ಯಕ್ರಮ ರಾಜ್ಯದಲ್ಲಿಯೆ ಮೊದಲ ಕಾರ್ಯಕ್ರಮವಾಗಿದೆ ಇದರ ಉದ್ದೇಶ ಮತದಾರರಿಗೆ ತಮ್ಮ- ತಮ್ಮ ಮತಗಟ್ಟೆಗಳನ್ನು ಪರಿಚಯಿಸುವದಾಗಿದೆ ಈ ಕಾರ್ಯಕ್ರಮದಲ್ಲಿ ಸ್ಕೌಟ್ ಗೈಡ್ಸ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವದಕ್ಕೆ ತಮಗೆ ಅಭಿನಂದನೆಗಳು. ಎಲ್ಲರೂ ಮತದಾನ ದಿನದಂದು ಮತ ಹಾಕುವ ಮೂಲಕ ಈ ಸಾಮೂಹಿಕ ಮತದಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದರು.
ಮತದಾನ ಜಾಗೃತಿ ಕುರಿತ ಪಾರಂಪರಿಕ ನಡಿಗೆ ಬೀದರ ಕೋಟೆಯ ಮುಖ್ಯ ದ್ವಾರದಿಂದ ಚೌಬಾರದವರೆಗೆ ವಿವಿಧ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಮತದಾನದ ಧ್ವಜಾರೋಹಣ ನೆರವೇರಿಸಲಾಯಿತು. ಜಾಥಾ ಚೌಬಾರ ತಲುಪಿದ ನಂತರ ಎಲ್ಲರಿಗೂ ಮತದಾರರ ಪ್ರತಿಜ್ನಾ ವಿಧಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೋಧಿಸಿದರು.
ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಿರೀಶ್ ರಂಜೋಳಕರ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಕಾಂತ ಶಹಾಬಾದಕರ್. ರಾಜ್ಯ ಮಟ್ಟದ ಚುನಾವಣಾ ಮಾಸ್ಟರ್ ತರಬೇತಿದಾರ ಗೌತಮ ಅರಳಿ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಜಗನ್ನಾಥ ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು. ಸ್ವ- ಸಹಾಯ ಸಂಘಗಳ ಮಹಿಳೆಯರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.