ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ

ಬೀದರ್ :ಮೇ.1: ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಹೆಚ್ಚಾಗಿದ್ದು ಜೀವ ಹಾನಿಯಾಗುತ್ತಿವೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 111 ರಸ್ತೆ ಅಪಘಾತ ಸಂಭವಿಸಿದ್ದು. ಇದರಲ್ಲಿ 113 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷಾ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ, ಜಿಲ್ಲಾ ಪೆÇಲೀಸ್ ಹಾಗೂ ಸಾರಿಗೆ ಇಲಾಖೆಗಳು ಜಂಟಿಯಾಗಿ ಹಮ್ಮಿಕೊಂಡಿವೆ. ಇದಕ್ಕೆ ಖ್ಯಾತ ಹಾಸ್ಯ ಕಲಾವಿದ ರಘುಪ್ರಿಯಾ ಕೈಜೊಡಿಸಿದ್ದಾರೆ.
ಈಗಾಗಲೇ ರಸ್ತೆ ಅಪಘಾತ ತಡೆಯಲು ರಸ್ತೆ ಸುರಕ್ಷತೆಯ ನಿಯಮಗಳನ್ನು ಕಾಪಾಡುವಂತೆ ಜಾಗೃತಿ ಮೂಡಿಸುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.
ಜೊತೆಗೆ ಆಟೋಗಳಿಗೂ ವಿಶೇಷ ಸಂಖ್ಯೆ ಹಾಗೂ ಪೆÇಸ್ಟರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಆದರಿಂದ ಎಲ್ಲಾ ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.