ಎಲ್ಲಾರು ಲಸಿಕೆ ತಪ್ಪದೆ ಹಾಕಿಸಿ:ಅಂಜುಂ ತಬಸುಮ್

(ಸಂಜೆವಾಣಿ ವಾರ್ತೆ)
ಹುಮನಾಬಾದ್:ಆ.8: ‘ಪೆÇೀಷಕರು ಮಕ್ಕಳ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನು ತಪ್ಪದೆ ಹಾಕಿಸಿ ರೋಗಗಳಿಂದ ಮುಕ್ತಗೊಳಿಸಬೇಕು’ ಎಂದು ತಹಶೀಲ್ದಾರ್ ಅಂಜುಂ ತಬಸುಮ್ ಹೇಳಿದರು.
ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಿಷನ್ ಇಂದ್ರ ಧನುಷ 5.0 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
“ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು’ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಆಸ್ಪತ್ರೆಯ ಮುಖ್ಯಾಧಿಕಾರಿ ಡಾ. ನಾಗನಾಥ ಹುಲಸೂರೆ ಮಾತನಾಡಿ, ದಡಾರ ರುಬೆಲ್ಲಾ ನಿರ್ಮೂಲನೆಯತ್ತ ದೊಡ್ಡ ಹೆಜ್ಜೆ ಇಡಲಾಗಿದೆ. ಒಟ್ಟಾರೆ ಮಕ್ಕಳನ್ನು ಬಾಧಿಸುವ 12 ರೋಗ ನಿಯಂತ್ರಣಕ್ಕೆ ಪೂರಕವಾಗಿ ಲಸಿಕೆ ನೀಡಲಾಗುತ್ತಿದೆ’ ಎಂದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಮಂಜುನಾಥ್ ಪಂಚಾಳ್, ಡಾ. ಸಂಗೀತಾ ಹುಲಸೂರೆ, ಡಾ ಬಾಖರ್, ಸುಕೇಶಿನಿ, ಶಿವಕುಮಾರ ಕಿವಡೆ ,ಸಚಿನ ಮಠಪತಿ ಸೇರಿದಂತೆ ಇತರರು ಇದ್ದರು.