ಎಲ್ಲಾ ಮಕ್ಕಳಿಗೂ ಪೊಲಿಯೋ ಲಸಿಕೆ ನೀಡಿ: ಎಂ.ಎಸ್ ದಿವಾಕರ್


ವಿಜಯನಗರ    , ಹೊಸಪೇಟೆ ಫೆ.24 : ಜಿಲ್ಲೆಯ ಯಾವುದೇ 5 ವರ್ಷದೊಳಗಿನ ಮಕ್ಕಳು ಪೊಲಿಯೋ ಲಸಿಕೆಯಿಂದ ವಂಚಿತವಾಗದಂತೆ ಎಲ್ಲಾ ಮಕ್ಕಳಿಗೂ ಪೊಲಿಯೊ ಲಸಿಕೆ ನೀಡಿ ಜಿಲ್ಲೆಯ ಪ್ರಗತಿಯು ಪ್ರತಿಶತ 100 ರಷ್ಟು ಆಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಫೆ.23ರಂದು ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಮತ್ತು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಅಂಗವಾಗಿ 1 ವರ್ಷದಿಂದ 19 ವರ್ಷದ ಎಲ್ಲಾ ಮಕ್ಕಳಲ್ಲಿ ಜಂತುಹುಳು ನಿವಾರಣೆಗಾಗಿ ಸರ್ಕಾರದಿಂದ ಮಾತ್ರೆಗಳನ್ನು ಉಚಿತವಾಗಿ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಲ್ಲಿ ನೀಡಲಾಗುತ್ತದೆ. ಅದರಂತೆ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ  ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಗುತ್ತದೆ. ಆದ್ದರಿಂದ ಎಲ್ಲಾ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೂಚಿಸಿದರು. ಇದೆ ವೇಳೆ ಕಾರ್ಯಕ್ರಮದ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ. ಅವರು ಮಾತನಾಡಿ, ಗ್ರಾಮಗಳಲ್ಲಿ ಹಾಗು ನಗರ ಪ್ರದೇಶಗಳಲ್ಲಿ ವಾಸವಿರುವ ಜನಸಂಖ್ಯೆಗೆ ಪೋಲಿಯೋ ಲಸಿಕೆಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ದುರ್ಗಮ ಪ್ರದೇಶಗಳಲ್ಲಿ ವಾಸವಿರುವ ಜನಸಂಖ್ಯೆಗೂ ಈ ಪೋಲಿಯೋ ಲಸಿಕೆಯನ್ನು ನೀಡಿದಲ್ಲಿ ಸದರಿ ಕಾರ್ಯಕ್ರಮದ ಉದ್ದೇಶ ಸಾಕಾರವಾಗುವುದರ ಜೊತೆಗೆ ಪೋಲಿಯೋವನ್ನು ಜಾಗತಿಕ ಮಟ್ಟದಿಂದ ನಿರ್ಮೂಲನೆ ಮಾಡಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಂಕರ್ ನಾಯ್ಕ್ ಅವರು ಮಾತನಾಡಿ,  ಮಾರ್ಚ್ 3 ರಿಂದ ಮಾರ್ಚ್ 6ರವರೆಗೆ ರಾಷ್ಟ್ರೀಯ ಫಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಸರ್ಕಾರವು ಹಮ್ಮಿಕೊಂಡಿದ್ದು ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹಾಕಿಸಿದ್ದರೂ ಈ ಸುತ್ತಿನಲ್ಲಿ ಮತ್ತೆ ಪೋಲಿಯೋ ಹನಿ ಹಾಕಿಸಿಕೊಳ್ಳುವುದರ ಮೂಲಕ ಪೋಲಿಯೋ ನಿರ್ಮೂಲನೆಗೆ ಸಹಕರಿಸಲು ಕೋರಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜಂಬಯ್ಯ ಬಿ ಮಾತನಾಡಿ, ವಿಜಯನಗರ ಜಿಲ್ಲೆಯ 5 ವರ್ಷದ ಮಕ್ಕಳ ಸಂಖ್ಯೆಯು 13.30.409 ಇರುತ್ತದೆ. ಈ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲು 1034 ಬೂತ್‍ಗಳು ಮತ್ತು 862 ಮನೆಗಳಿಗೆ ತೆರಳಿ ಪೋಲಿಯೋ ಹನಿ ಹಾಕಲು ತಂಡಗಳನ್ನು ರಚಿಸಲಾಗಿದ್ದು, 2184 ಲಸಿಕಾದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ.ರಾಧಿಕ, ಡಾ.ಕಮಲಮ್ಮ ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

One attachment • Scanned by Gmail