ಎಲ್ಲಾ ವರ್ಗದವರಿಗೂ ಪೂರಕವಾದ ಬಜೆಟ್ : ಎಂಪಿ.ಲತಾ ಮಲ್ಲಿಕಾರ್ಜುನ.


ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಫೆ.17; ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಎಲ್ಲಾ ವರ್ಗದವರ ಅಭಿವೃದ್ಧಿಯ ಪೂರಕವಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿಯೊಂದು ಕುಟುಂಬಕ್ಕೆ ವಾರ್ಷಿಕ 50ಸಾವಿರದಿಂದ 55 ಸಾವಿರ ರೂಪಾಯಿ ಒದಗಿಸಲಾಗುತ್ತಿದೆ. ರೈತರಿಗೆ ಆದಾಯ ಹೆಚ್ಚಿಸಲು ರೈತರು ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆ ಒದಗಿಸಲು ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗಿದೆ ಎಂದು ಹೇಳಿದ್ದಾರೆ.
ರೈತ ಮಹಿಳೆಯರಲ್ಲಿ ಹೈನುಗಾರಿಕೆ ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀಗೆ ಸರ್ಕಾರದಿಂದ ಶೇ6ರ ಬಡ್ಡಿ ಸಹಾಯ ಧನ ನೀಡುವುದು, ರೈತರಿಗೆ ಅಲ್ಪಾವಧಿ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಗಳಿಗೆ ಹೆಚ್ಚಿಸಿ ಮಧ್ಯಮಾವಧಿ ಮತ್ತು ಧೀರ್ಘಾವಧಿಗೆ ನೀಡುವ ಶೇ3 ನೀಡುವ ಸಾಲದ ಮೊತ್ತವನ್ನು 10ಲಕ್ಷದಿಂದ 15ಲಕ್ಷಕ್ಕೆ ಹೆಚ್ಚಿಸಿ ರೈತರಿಗೆ ಅನುಕೂಲ ಮಾಡಲಾಗಿದೆ ಎಂದಿದ್ದಾರೆ.
ಈ ಬಾರಿ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಹಣವನ್ನು ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಹೆಚ್ಚಿನ ಹಣವನ್ನು ಮೀಸಲಿಟ್ಟಿದೆ. ಮಾಜಿ ದೇವದಾಸಿ ಮಹಿಳೆಯರ ಮಾಸಾಶನವನ್ನು ಹೆಚ್ಚಿಸಿದೆ ಮತ್ತು ನಿವೇಶನ ಹೊಂದಿರುವವರಿಗೆ ವಸತಿ ಸೌಲಭ್ಯ ಒದಗಿಸಿದೆ. ಒಟ್ಟಾರೆಯಾಗಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಜೆಟ್‍ನಲ್ಲಿ ಎಲ್ಲಾ ಸಮಾಜದವರ ಏಳಿಗೆಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

One attachment • Scanned by Gmail

ReplyForwardAdd reaction